ಅಮೀನಗಡ
ಪರಿಶಿಷ್ಟರಲ್ಲಿ ಅತಿ ಹಿಂದುಳಿದವರನ್ನು ಗುರುತಿಸಿ ಒಳ ಮೀಸಲಾತಿ ನೀಡುವ ರಾಜ್ಯ ಸರಕಾರಗಳ ಅಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ಐತಿಹಾಸಿಕ ಎಂದು ಮಾದಿಗ ಸಮಾಜದ ಮುಖಂಡ ಜಗದೀಶ ಹೊಸಮನಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ವರ್ಷದಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಗಳಲ್ಲಿ ಒಳಮೀಸಲಾತಿಗಾಗಿ ಹೋರಾಟಗಳೇ ನಡೆದಿದ್ದವು. ಇದೀಗ ಸುಪ್ರೀಂ ಕೋರ್ಟ್ ಮೀಸಲಾತಿ ಕುರಿತು ಮಹತ್ವದ ತೀರ್ಪು ನೀಡಿದೆ. ಒಳ ಮೀಸಲಾತಿ ಕಾನೂನು ಬದ್ಧವಾಗಿದೆ. ಸರಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಒಳ ಮೀಸಲಾತಿ ನೀಡುವ ಅಕಾರವನ್ನು ಆಯಾ ರಾಜ್ಯಗಳಿಗೆ ನೀಡಿದ್ದು ರಾಜ್ಯದಲ್ಲಿ ಶೀಘ್ರ ಜಾರಿಯಾಗಲಿ ಎಂದು ಒತ್ತಾಯಿಸಿದರು.
ಮುಖಂಡರಾದ ಕೋನಪ್ಪ ಕುಣಿಬೆಂಚಿ, ಹನಮಂತ ಬೆನಕನವಾರಿ, ಮಂಗಳಪ್ಪ ನಿಂಬಲಗುAದಿ ಇತರರು ಇದ್ದರು.