ಬಾಗಲಕೋಟೆ:
ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಎಕರೆಗೆ 3 ಕ್ವಿಂಟಲ್‍ನಂತೆ ಪ್ರತಿ ರೈತರಿಂದ ಗರಿಷ್ಟ ಪ್ರಮಾಣ 15 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕ್ರಾಂತಿ ಖರೀದಿ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾದ ಖರೀದಿ ಕೇಂದ್ರಗಳಲ್ಲಿ ನೋಂದಣಿ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶರು ಆಗಿರುವ ಜಿಲ್ಲಾ ಟಾಸ್ಕಪೋರ್ಸ ಸಮಿತಿ ಸದಸ್ಯ ಕಾರ್ಯದರ್ಶಿ ಡಿ.ಎಸ್.ರೆಡ್ಡಿ ತಿಳಿಸಿದ್ದಾರೆ.
ಬಾಗಲಕೋಟೆ ತಾಲೂಕಿನಲ್ಲಿ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ಖಜ್ಜಿಡೋಣಿ (9901106360), ಬಾದಾಮಿ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ಕಗಲಗೊಂಬ (9611859963), ಕೆಂದೂರ (9480410494), ನಂದಿಕೇಶ್ವರ (7624951919), ಹೆಬ್ಬಳ್ಳಿ (9916270586), ಮುಧೋಳ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ ಜುನ್ನೂರ (8296637794), ಬೀಳಗಿ ತಾಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ ಸೊನ್ನ (9632289239), ಹುನಗುಂದ ತಾಲೂಕಿನ ಟಿ.ಎ.ಪಿ.ಸಿಎಂಎಸ್ ಹುನಗುಂದ (9480262655) ಖರೀದಿ ಕೇಂದ್ರವನ್ನು ತೆರೆಯಲಾಗಿದೆ.
ಜಿಲ್ಲೆಯ ರೈತರು ಖರೀದಿ ಕೇಂದ್ರಗಳಲ್ಲಿ ರೈತರು ಆಧಾರ ಕಾರ್ಡ, ಪಹಣಿ ಪತ್ರಿಕೆ, ಆಧಾರ ಲಿಂಕ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸಬುಕ್ಕ ಪ್ರತಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು, ಕೆ.ಓ.ಎಫ್ ಬಾಗಲಕೋಟೆ (9900553056) ಇವರನ್ನು ಸಂಪರ್ಕಿಸುವಂತೆ ಡಿ.ಎಸ್.ರೆಡ್ಡಿ ತಿಳಿಸಿದ್ದಾರೆ.
*ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಕಲಾವಿದರು ಪಾಲ್ಗೊಳ್ಳಿ*
ಬಾಗಲಕೋಟೆ:
ಜಿಲ್ಲೆಯಲ್ಲಿ ಸೆಪ್ಟೆಂಬರ 15 ರಂದು ಜರುಗಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 95 ಕಿ.ಮೀ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತಿದ್ದು, ಈ ಕಾರ್ಯದಲ್ಲಿ ಜಿಲ್ಲೆಯ ಜನಪದ, ರಂಗಭೂಮಿ, ವೃತ್ತಿ ರಂಗಭೂಮಿ ಕಲಾವಿದರು ಹಾಗೂ ಕನ್ನಡಪರ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ವೆಬ್‍ಸೈಟ್ ಲಿಂಕ್ http://democracydaykarnataka.in/registration ಮೂಲಕ ನೋಂದಾಯಿಸಿಕೊಂಡು ಸಂವಿಧಾನದ ಆಶಯಗಳನ್ನು ಬಲಿಷ್ಟಗೊಳಿಸಲು ತಮ್ಮ ತಮ್ಮ ವೇಷಭೂಷಣಗಳೊಂದಿಗೆ ಭಾಗವಹಿಸಿ ಪ್ರಮಾಣ ಪತ್ರ ಪಡೆಯುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.