This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Education NewsLocal NewsNational NewsState News

ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

ಬಾಗಲಕೋಟೆ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ವಿವಿಧ ಧರ್ಮದ ಗುರುಗಳಾದ ಸಂಸ್ಕøತ ಪಂಡಿತ ಬಿಂಧು‌ಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಆಸೀಫ್ ಎಲ್. ಮುದಗಲ್ಲ ಕುರಾನ ಹಾಗೂ ಅಗ್ನೆಲ್ ಫಾದರ್ ಬೈಬಲ್ ಕುರಿತು ಪಠಣ ಮಾಡಿದರು.

ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಸ್ವಚ್ಛತಾ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಂ.ತುಂಬರಮಟ್ಟಿ, ಎನ್.ಐಸಿಯ ಗಿರಿಯಾಚಾರ, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಸಂಗಮೇಶ ಸಣ್ಣತಂಗಿ ಕಾರ್ಯಕ್ರಮ ನಿರೂಪಿಸಿದರು.

";