This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು: ಸಚಿವ ಮಧು ಬಂಗಾರಪ್ಪ

ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು: ಸಚಿವ ಮಧು ಬಂಗಾರಪ್ಪ

ಬೆಳಗಾವಿ,: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

 

ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ 15000/- ಹಾಗೂ ರೂ.16000/- ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪುಸ್ತಾವನೆ ಸಲ್ಲಿಸಲಾಗಿತ್ತು.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯು ದಿನಾಂಕ.13.6.2022 ರಲ್ಲಿ ಪರಿಷ್ಕರಿಸಲು ಸಹಮತಿ ನೀಡಿರುವುದರಿಂದ ಗೌರವ ಸಂಭಾವನೆ ಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು ದಿನಾಂಕ.25.3.2024 ರಂದು ಹಿಂಬರಹ ನೀಡಿದೆ.

ಆದರೆ ಮತ್ತೊಮ್ಮೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗುವುದು ಎಂದರು. ಅತಿಥಿ ಶಿಕ್ಷಕರು /ಉಪನ್ಯಾಸಕರ ಬದಲಾಗಿ ಅರೆಕಾಲಿಕ ಶಿಕ್ಷ ಕರ ನೇಮಕ ಮಾಡುವ ಪ್ರಸ್ತಾವನೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟ ಪಡಿಸಿದರು.

ಸಭಾಧ್ಯಕ್ಷರ ನೂತನ ಪೀಠದ ವಿಶೇಷತೆ ತಿಳಿಸಿದ ಯು.ಟಿ. ಖಾದರ್

ಸಂವಿಧಾನದಲ್ಲಿ ಸದನಕ್ಕೆ ಬಹಳ ಉನ್ನತ ಸ್ಥಾನವನ್ನು ನೀಡಲಾಗಿದೆ. ಅಂತಹ ಸದನವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಸಭಾಧ್ಯಕ್ಷರ ಹುದ್ದೆ ಸಹ ಒಂದು ಸಂವಿಧಾನಾತ್ಮಕ ಹುದ್ದೆಯಾಗಿದೆ. ಅಂತಹ ಹುದ್ದೆ ಅಲಂಕರಿಸುವ ಸಭಾಧ್ಯಕ್ಷರು ಆಸೀನರಾಗುವ ಪೀಠ ಸಹ ಅಷ್ಟೇ ಪ್ರಾಮುಖ್ಯತೆ ಹೊಂದಿರಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದ ಪೀಠದ ಮಾದರಿಯಲ್ಲಿಯೇ ಬೆಳಗಾವಿಯಲ್ಲಿನ ಸುವರ್ಣ ವಿಧಾನಸೌಧದಲ್ಲಿನ ವಿಧಾನಸಭೆಯ ಸಭಾಂಗಣದಲ್ಲಿರುವ ಸಭಾಧ್ಯಕ್ಷರ ಪೀಠವನ್ನು ತಯಾರಿಸಿ ಅಳವಡಿಸಲಾಗಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಬಣ್ಣಿಸಿದರು.

ವಿಧಾನಸೌಧವನ್ನು ಕಟ್ಟಿಸಿದ ದಿ. ಕೆಂಗಲ್ ಹನುಮಂತಯ್ಯನವರು ಸಭಾಧ್ಯಕ್ಷ ಪೀಠದ ಬಗ್ಗೆ ಒಂದು ಮಹೋನ್ನತ ಪರಿಕಲ್ಪನೆ ಹೊಂದಿದ್ದರು. ಈ ಪೀಠವನ್ನು ವಿಶಿಷ್ಟವಾಗಿ ರೂಪಿಸಬೇಕೆಂದು ಅವರು ಯೋಜಿಸಿದ್ದರು, ಅದರಂತೆ ಅವರು ನಮ್ಮ ಇತಿಹಾಸದಲ್ಲಿ ರಾಜ್ಯವನ್ನು ಬಹಳ ಕಾಲ ಉತ್ತಮವಾಗಿ ಆಡಳಿತ ನಡೆಸಿದ ರಾಷ್ಟÇಕೂಟರು ಹಾಗೂ ಹೊಯ್ಸಳರು ಹೊಂದಿದ್ದ ರಾಷ್ಟ್ರ ಲಾಂಛನಗಳನ್ನು ಅದರಲ್ಲಿ ಅಳವಡಿಸಿಕೊಳ್ಳಬೇಕೆಂಬ ಚಿಂತನೆ ನಡೆಸಿ, ಈ ಉದ್ದೇಶಕ್ಕಾಗಿಯೇ ಶಿವಮೊಗ್ಗದಲ್ಲಿ ಲಭ್ಯವಿದ್ದ ಉತ್ತಮ ಗುಣಮಟ್ಟದ ಬೀಟೆ ಮರ ಆಯ್ಕೆ ಮಾಡಿ, ಅಲ್ಲಿನ ಗುಡಿಗಾರರಿಗೆ ತಮ್ಮ ಕನಸಿನ ಚಿಂತನೆಗಳನ್ನು ವಿವರಿಸಿ, ಅದೇ ರೀತಿಯಲ್ಲಿಯೇ ಪೀಠ ಮೂಡಿಬರುವಂತೆ ಮುತುವರ್ಜಿ ವಹಿಸಿದ್ದರು. ರಾಷ್ಟÇಕೂಟರು ಹೊಂದಿದ್ದ ಗಂಡಭೇರುAಡ ಚಿಹ್ನೆಯನ್ನು ಪೀಠದಲ್ಲಿ ಅಳವಡಿಸಿದ್ದರು.

ಗಂಡಭೇರುಂಡ ಚಿಹ್ನೆಯನ್ನು ರಾಷ್ಟÇಕೂಟರು ತಮ್ಮ ಅಧಿಕಾರ ಹಾಗೂ ಶಕ್ತಿ ಸಾಮರ್ಥ್ಯದ ಪ್ರತೀಕವಾಗಿ ಹಾಗೂ ದೈವಿಕ ರಕ್ಷಣೆ ಹೊಂದಿರುವ ಪ್ರತೀಕವಾಗಿ ಉಪಯೋಸಿದ್ದರು. ಅದೇ ಲಾಂಛನವನ್ನು ಈ ಪೀಠದಲ್ಲಿ ಅದರ ಪ್ರತಿರೂಪವಾಗಿ ಕೆತ್ತಲಾಗಿದೆ. ವಿಶಾಲವಾದ ಸಾಮ್ರಾಜ್ಯವನ್ನು ಹೊಂದಿದ್ದ ಹಾಗೂ ಬಹುಕಾಲ ಉತ್ತಮವಾಗಿ ಆಳಿದ ಹೊಯ್ಸಳರು ಸಹ ಶರಭ ಅಂದರೆ ಸಿಂಹದ ಲಾಂಛನ ಹೊಂದಿದ್ದರು. ಸಿಂಹವು ಶೌರ್ಯದ ಪ್ರತೀಕವಾಗಿದ್ದು, ಅದನ್ನೂ ಸಹ ಪೀಠದ ಎರಡೂ ಬದಿಗಳಲ್ಲಿ ಕೆತ್ತಲಾಗಿದೆ.

ಅದೇ ರೀತಿ ಪೀಠದ ಮೇಲ್ಭಾಗದಲ್ಲಿ ಸೂರ್ಯಕಾಂತಿ ಹೂವಿನ ಚಿತ್ತಾರವನ್ನು ಕೆತ್ತಲಾಗಿದ್ದು, ಇದು ಸಭಾಧ್ಯಕ್ಷರಿಗೆ ಒಂದು ರೀತಿಯ ಮೇಲ್ಛಾವಣಿಯಂತೆ ರೂಪಿಸಲಾಗಿದೆ. ಪೀಠದ ಮುಂಭಾಗದ ಮೇಲೆ ಸೂರ್ಯ ಮತ್ತು ಚಂದ್ರರ ಚಿಹ್ನೆಗಳನ್ನು ಕೆತ್ತಲಾಗಿದ್ದು, ಸೂರ್ಯ ಮತ್ತು ಚಂದ್ರರ ಚಿಹ್ನೆಯ ಅಮರತ್ವವನ್ನು ಪ್ರತಿರೂಪಿಸುವಂತಹ ಚಿಹ್ನೆಯನ್ನು ಕೆತ್ತಲಾಗಿದೆ. ಪೀಠದ ಮೇಲ್ಭಾಗದ ಎರಡೂ ಬದಿಗಳಲ್ಲಿ ಮಾವಿನ ಕಾಯಿ ರೂಪವನ್ನು ಕೆತ್ತಲಾಗಿದ್ದು, ನಮ್ಮ ದೇಶದಲ್ಲಿ ಮಾವಿನ ಕಾಯಿಗೆ ವೈಜ್ಞಾನಿಕ ಹಾಗೂ ಧಾಮಿಕವಾಗಿ ಬಹಳ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಕಾಯಿ ಬೆಳವಣಿಗೆಯ ದ್ಯೋತಕವಾಗಿದ್ದು, ಈ ಹಿನ್ನೆಲೆಯಲ್ಲಿ ಮಾವಿನ ಕಾಯಿ ಪ್ರತಿರೂಪವನ್ನು ಕೆತ್ತಲಾಗಿದೆ.

Nimma Suddi
";