ಬಾಗಲಕೋಟೆ
ಮನುಷ್ಯನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡಾ ಕ್ಷೇತ್ರದಲ್ಲಿ ಪ್ರತಿಯೊಬ್ಬರೂ ತೊಡಗಿಕೊಳ್ಳುವುದು ಮುಖ್ಯವಾಗಿದೆ ಎಂದು ಬಾಗಲಕೋಟೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಕಾರಿ ಸುಷ್ಮಾ ಗವಳಿ ಹೇಳಿದರು.
ಇಳಕಲ್ ತಾಲೂಕಿನ ಕೆಲೂರು ಗ್ರಾಮದ ಗುರು ಮಂಟೇಶ್ವರ ಪ್ರೌಢಶಾಲೆಯಲ್ಲಿ ನೆಹರು ಯುವ ಕೇಂದ್ರ ಹಾಗೂ ಬೆಳಕು ಪ್ರತಿಷ್ಠಾನದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಶಾರೀರಿಕ ಮತ್ತು ಮಾನಸಿಕವಾಗಿ ಬೆಳವಣಿಗೆ ಆಗಲು ಸಾಧ್ಯವಿದೆ. ಕ್ರೀಡೆ ಮತ್ತು ಯೋಗ ಮನುಷ್ಯನ ಅವಿಭಾಜ್ಯ ಅಂಗಗಳಾಗಿದ್ದು, ಇದರಿಂದ ಆರೋಗ್ಯ ಸ್ಥಿರವಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಒಂದಿಲ್ಲೊAದು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯಶಿಕ್ಷಕ ಎಸ್.ಬಿ.ಹೆಳವರ, ವಿದ್ಯಾರ್ಥಿ ದೆಸೆಯಿಂದಲೇ ಕ್ರೀಡಾಕೂಟಗಳಲ್ಲಿ ಭಾಗಿಯಾಗಬೇಕು. ಕ್ರೀಡೆ ನಮ್ಮ ಮಾನಸಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರ ಮಾತನಾಡಿದರು. ಆರೋಗ್ಯ ಇಲಾಖೆಯ ಎಚ್.ಸಿ.ಧೂಪದ, ಬೆಳಕು ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಗುಳೇದಗುಡ್ಡ, ಶಿಕ್ಷಕರಾದ ಎಂ.ಜೆ.ರುದ್ರಾಕ್ಷಿ, ಎಸ್.ಬಿ.ಯಾವಗಲ್ಲಮಠ, ಎಂ.ಎಸ್.ಗ್ವಾಗೇರಿ, ಬಿ.ಎಸ್.ಕಮತರ, ಬಿ.ಎಚ್.ನಾಲತವಾಡ, ಕೆ.ಎಸ್.ಬೀಳಗಿ, ಎ.ಎಂ.ಕಂಬಳಿ ಇತರರಿದ್ದರು.