This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Crime NewsState News

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆ

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ದಿನ ಕಳೆದಂತೆ ಮಕ್ಕಳು ತುಂಬಾ ಸೂಕ್ಷ್ಮವಾಗುತ್ತಿದ್ದಾರೆ. ಪೋಷಕರು ಅಥವಾ ಶಿಕ್ಷಕರು ಮಕ್ಕಳ ಒಳ್ಳೆಯದಕ್ಕೆ ಬುದ್ಧಿವಾದ ಹೇಳಿದರೂ ತಡೆದುಕೊಳ್ಳುವ ಸ್ಥಿತಿಯಲ್ಲಿ ಮಕ್ಕಳಿರುವುದಿಲ್ಲ.

ತಾಯಿ ನಿರಾಕರಿಸಿದಾಗ ಬಾಲಕಿ ಮೆಟ್ಟಿಲು ಹತ್ತಿ ಡೋರ್ ಕರ್ಟನ್ ಗೆ ನೇಣು ಬಿಗಿದುಕೊಂಡಿದ್ದಾಳೆ ಎಂದು ದನ್ವಂತ್ರಿ ನಗರ ಠಾಣೆಯ ಇನ್ಸ್ ಪೆಕ್ಟರ್ ವಿನೋದ್ ಪಾಠಕ್ ತಿಳಿಸಿದ್ದಾರೆ. ಶವ ಪರೀಕ್ಷೆ ನಡೆಸಲಾಗುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಮಧ್ಯಪ್ರದೇಶದ ಜಬಲ್​ಪುರದಲ್ಲಿರುವ ಪ್ರಸಿದ್ಧ ಪ್ರವಾಸಿತಾಣವಾದ ಭೇದಘಾಟ್​ಗೆ ಕರೆದೊಯ್ಯಲು ತಾಯಿ ನಿರಾಕರಿಸಿದ್ದಕ್ಕೆ 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಭೇದಘಾಟ್‌ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.