ಕಲಬುರಗಿ: ಸಾವಿರಾರು ಮಹಿಳೆಯರ ಅತ್ಯಾಚಾರವೆಸಗಿ ವಿದೇಶಕ್ಕೆ ಓಡಿ ಹೋದವನನ್ನು ಕರೆತಂದು ಮಂಗಳಸೂತ್ರದ ಬಗ್ಗೆ ಮಾತಾಡಿ ಪ್ರಧಾನಿ ಮೋದಿ ಅವರೇ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿರುಗೇಟು ನೀಡಿದರು.
ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಮೋದಿಸುಮ್ಮನೆ ಇದ್ದು, ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದರು.
ಅದೆ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಉತ್ತರಿಸಿಲಿ. ಈ ದೇಶದಲ್ಲಿ ಬಹಳಷ್ಟು ಪ್ರದಾನಿಗಳು ಆಗಿ ಹೋಗಿದ್ದು, ಅವರೆಲ್ಲ ಸತ್ಯದ ಹಾದಿಯಲ್ಲಿ ನಡೆದಿದ್ದಾರೆ. ಆದರೆ ಮೋದಿ ಅವರು ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ ಹೇಳಲಿ ಎಂದು ಸವಾಲು ಹಾಕಿದರು.
ಕರ್ನಾಟಕದಲ್ಲಿ ಮೋದಿ ಅವರ ಮೈತ್ರಿ ಅಭ್ಯರ್ಥಿ ಸಾವಿರಾರು ಮಹಿಳೆಯರಿಗೆ ಅತ್ಯಾಚಾರ ಎಸಗಿ ವಿದೇಶ ಕ್ಕೆ ಓಡಿ ಹೋಗಿದ್ದಾನೆ. ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗುವಾಗ ಮಾಹಿತಿ ಪಡೆದುಕೊಳ್ಳುವ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಈತ ಓಡಿ ಹೋಗಿದ್ದು ಗೊತ್ತಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ ಆ ವ್ಯಕ್ತಿಯನ್ನು ಮರಳಿ ದೇಶಕ್ಕೆ ಕರೆತಂದ ಬಳಿಕವೇ ಮಂಗಳಸೂತ್ರದ ಬಗ್ಗೆ ಮಾತಾಡಿ ” ಎಂದು ವಾಗ್ದಾಳಿ ನಡೆದಿದರು.