This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

State News

ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಸಾಧ್ಯತೆ: ಕರ್ನಾಟಕದಿಂದ ರಾಜ್ಯಸಭೆಗೆ ರಘುರಾಮ್‌ ರಾಜನ್‌

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆ ಇದ್ದು, ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ)ನ ನಿವೃತ್ತ ಗವರ್ನರ್‌ ರಾಘುರಾಮ್‌ ರಾಜನ್‌ ಹೆಸರು ಪ್ರಮುಖವಾಗಿ ಚರ್ಚೆಯಲ್ಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ಪೈಕಿ ಆಡಳಿತಾರೂಢ ಕಾಂಗ್ರೆಸ್‌ಗೆ 3 ಸ್ಥಾನ ಗೆಲ್ಲಲು ಅವಕಾಶವಿದೆ. ಆದರೆ, ಅಭ್ಯರ್ಥಿಗಳು ಯಾರಾಗಬಹುದು ಎಂಬ ಗುಟ್ಟನ್ನು ಮಾತ್ರ ಪಕ್ಷ ಇನ್ನೂ ಬಿಟ್ಟುಕೊಟ್ಟಿಲ್ಲ.ಉನ್ನತ ಮೂಲಗಳ ಪ್ರಕಾರ, ರಾಜ್ಯಸಭೆಯ 1 ಸ್ಥಾನಕ್ಕೆ ವಿಷಯ ತಜ್ಞರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದೆ.

ಇಂಥವರು ಹೈಕಮಾಂಡ್‌ನ ನೇರ ಆಯ್ಕೆಯಾಗಲಿದ್ದಾರೆ. ರಾಘುರಾಮ್‌ ರಾಜನ್‌ ಅವರಿಗೆ ಈ ಅದೃಷ್ಟ ಒಲಿಯಲೂಬಹುದು ಎಂದು ಹೇಳಲಾಗುತ್ತಿದೆ.ರಿಸರ್ವ್‌ ಬ್ಯಾಂಕ್‌ನಿಂದ ನಿರ್ಗಮಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸರಕಾರದ ಆರ್ಥಿಕ ನೀತಿಯ ಬಗ್ಗೆ ನಿರಂತರವಾಗಿ ಟೀಕಿಸುತ್ತಿರುವ ರಘುರಾಮ್‌ ರಾಜನ್‌, ಪರ್ಯಾಯ ರಾಜಕೀಯ ಮೈತ್ರಿಕೂಟದ ನೆಚ್ಚಿನ ವ್ಯಕ್ತಿಯಾಗಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.