ಚಳ್ಳಕೆರೆ/ತುಮಕೂರು : ಚುನಾವಣೆ ಕರ್ತವ್ಯ ನಿರ್ವಹಿಸಿದ್ದ ವೇಳೆ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಮೃತ ಶಿಕ್ಷಕಿ ಯಶೋಧರ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.ಮುಂಜಾನೆ ಮತದಾನ ಆರಂಭದ ವೇಳೆಯಲ್ಲಿ ಯಶೋಧಮ್ಮನವರಿಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿದೆ.
ಇದೇ ವೇಳೆ ಮತದಾನದ ಬಳಿಕ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತುಮಕೂರಿನಿಂದ ವರದಿಯಾಗಿದ್ದು, ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿಯ ಮೇಗಳಗೊಲ್ಲರಹಟ್ಟಿ ಮತಗಟ್ಟೆ ಸಂಖ್ಯೆ 202ರಲ್ಲಿ ಸಹಾಯಕ ಮತಗಟ್ಟೆ ಅಧಿಕಾರಿ ಆಗಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದು, ಮೃತರನ್ನು ಯಶೋಧ (58) ವರ್ಷ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಸೆಕ್ಟರ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾಹನದಲ್ಲಿ ಆಸ್ಪತ್ರೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲುಪುವ ವೇಳೆಗಾಗಲೇ ತೀವ್ರ ಹೃದಯಾಘಾತಕ್ಕೆ ತುತ್ತಾದ್ದರಿಂದ ಯಶೋಧಮ್ಮ ಮೃತಪಟ್ಟಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಆನಂದ.ಬಿ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ತಿಲಿದು ಬಂದಿದೆ.