This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local NewsState News

ಅಂಗನವಾಡಿ ಸೇವೆ ಸಮರ್ಪಕ ಅನುಷ್ಠಾನಗೊಳಿಸಿ

ಅಂಗನವಾಡಿ ಸೇವೆ ಸಮರ್ಪಕ ಅನುಷ್ಠಾನಗೊಳಿಸಿ

ಪ್ರಗತಿ ಪರಿಶೀಲನಾ ಸಭೆ

ಬಾಗಲಕೋಟೆ

ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ನೀಡುವ ಸೇವೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಪಂ ಸಿಇಒ ಶಶಿಧರ ಕುರೇರ ಸೂಚಿಸಿದರು.

ನಗರದ ಜಿಪಂ ಸಭಾಭವನದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಗುಣಮಟ್ಟದ ಆಹಾರ ವಿತರಿಸುವುದು ಎಲ್ಲಾ ಸಿಡಿಪಿಒ ಹಾಗೂ ಮೇಲ್ವಿಚಾರಕಿಯರ ಕರ್ತವ್ಯವಾಗಿದೆ. ಇದರಲ್ಲಿ ಲೋಪ ಕಂಡುಬAದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಅಂಗನವಾಡಿ ಬೇಟಿ ನೀಡಿ ಪರಿಶೀಲಿಸಿದಾಗ ಕೆಲ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇದ್ದು, ಹಾಜರಾತಿ ಸುಧಾರಣೆಯಾಗಬೇಕು. ವಲಯ ಮೇಲ್ವಿಚಾರಕರು ಪ್ರತಿ ತಿಂಗಳು ಕಡ್ಡಾಯವಾಗಿ ಕೇಂದ್ರಗಳಿಗೆ ಬೇಟಿ ನೀಡಿ ಪೌಷ್ಟಿಕ ಆಹಾರ, ಮಕ್ಕಳ ಹಾಜರಾತಿ, ದಾಖಲಾತಿಗಳ ನಿರ್ವಹಣೆ, ಪೋಷಣಾ ಟ್ರಾಕರ್‌ನಲ್ಲಿ ಮಾಹಿತಿ ಅಳವಡಿಕೆ, ಕೇಂದ್ರಗಳ ಸ್ವಚ್ಚತೆ ಮತ್ತಿತರ ವಿಷಯಗಳ ಬಗ್ಗೆ ಪರಿಶೀಲಿಸಿ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯಗಳಾದ ಕುಡಿವ ನೀರು, ಶೌಚಾಲಯ, ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಥಳೀಯ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳೊAದಿಗೆ ಸಮನ್ವಯ ಸಾಸಿ ಸೌಕರ್ಯಗಳಿರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ೫೨೪ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಇಲ್ಲದ ಕಾರಣ ಬಾಡಿಗೆ ಕೇಂದ್ರದಲ್ಲಿದ್ದು ಅಂತವುಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಕಟ್ಟಡ ನಿರ್ಮಿಸುವಂತಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕವಿತಾಳ, ೬೬ ನಿವೇಶನ ಗುರುತಿಸಿ ಇಲಾಖೆಗೆ ಹಸ್ತಾಂತರ ಪಡೆಯಲಾಗಿದೆ. ಇನ್ನುಳಿದ ಕೇಂದ್ರಗಳಿಗೆ ೩ ತಿಂಗಳಲ್ಲಿ ನಿವೇಶನ ಗುರುತಿಸಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾತಿ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ನಿವೇಶನ ಗುರುತಿಸಲು ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆಯಲು ಹಾಗೂ ಶಿಕ್ಷಣ ಇಲಾಖೆಯಿಂದ ಶಾಲಾ ಆವರಣದಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಗುರುತಿಸಿ ಹಸ್ತಾಂತರ ಪಡೆಯಲು ಸಿಇಓ ಸೂಚಿಸಿದರು.

ಬಾಲ್ಯ ವಿವಾಹ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಸಿಇಒ ಇಲ್ಲಿವರೆಗೆ ೪೨ ಬಾಲ್ಯ ವಿವಾಹಕ್ಕೆ ಸಂಬAಸಿದ ದೂರುಗಳು ಬಂದಿದ್ದು, ಅದರಲ್ಲಿ ೩೨ನ್ನು ತಡೆಯಲಾಗಿದೆ. ಇನ್ನುಳಿದ ೮ ದೂರುಗಳು ಮದುವೆ ನಂತರ ಬಂದಿದ್ದು, ಅವಗಳಲ್ಲಿ ಒಂದು ಎಫ್‌ಐಆರ್ ದಾಖಲಿಸಲಾಗಿದೆ. ಇನ್ನುಳಿದ ೭ ಪ್ರಕರಣಗಳಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಉಪನಿರ್ದೇಶಕ ಪ್ರಭಾಕರ ತಿಳಿಸಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ತಳಮಟ್ಟದಲ್ಲಿ ಜಾಗೃತಿ ಮೂಡಿಸುವಂತೆ ಸಿಇಒ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅಮರೇಶ್ ಹಾವಿನ ಹಾಗೂ ಸಿಡಿಪಿಒ, ಮೇಲ್ವಿಚಾರಕರು ಇದ್ದರು.

 

Nimma Suddi
";