ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿರುವ ಪ್ರಕರಣ ವಿಚಾರವಾಗಿ ಹೈಕೋರ್ಟ್ ವಿಭಾಗೀಯ ಪೀಠ ಭಾನುವಾರ ವಿಶೇಷ ಕಲಾಪ ನಡೆಸಿತು.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ
ಬಿ. ವರ್ಲೆ, ನ್ಯಾ. ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠ, ಸುದೀರ್ಘ ವಾದ ಆಲಿಸಿದ ನಂತರ ವಿಚಾರಣೆಯನ್ನು
ಸೆ.8ಕ್ಕೆ ಮುಂದೂಡಿತು.
15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಪ್ರಕರಣದಲ್ಲಿ ಹಿಂದುಳಿದ ವರ್ಗ ಪರಿಗಣಿಸುವಾಗ ಅದಾಯ ಪ್ರಮಾಣಪತ್ರಕ್ಕೆ ಪತಿಯ ಅದಾಯವನ್ನು ಮಾನದಂಡವಾಗಿ ಇಟ್ಟುಕೊಳ್ಳಲಾಗಿತ್ತು.
ರಾಜ್ಯ ಸರಕಾರದ ಈ ನೀತಿಯನ್ನು
ಏಕಸದಸ್ಯ ಪೀಠ ಅಮಾನ್ಯಗೊಳಿಸಿ ಅಭ್ಯರ್ಥಿ ಸಲ್ಲಿಸುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ತಂದೆಯ ಜಾತಿ
ಮತ್ತು ಅದಾಯ ಪರಿಗಣಿಸಬೇಕೆಂದು ಸೂಚಿಸಿತ್ತು.
ಈ ಪ್ರಕಾರವಾಗಿ ಹೊಸದಾಗಿ ಆಯ್ಕೆ ಪಟ್ಟಿ ರೂಪಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿತ್ತು.
ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆಯಲ್ಲಿ ಸೇವಾ ವಿವಾದಗಳಿಗೆ ಸಂಬಂಧಿಸಿದ ಪೀಠದಲ್ಲಿ ವಿಚಾರಣೆಯಾಗದೇ ಇರುವುದರಿಂದ ಆದೇಶ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಮನವಿ ಮಾಡಿದ್ದರು.
ಈ ಹಿನ್ನೆಲೆ ಯಲ್ಲಿ ವರ್ಲೆ ನೇತೃತ್ವದ ವಿಭಾಗೀಯ ಪೀಠವು ಸುದೀರ್ಘ ವಾದ ಆಲಿಸಿ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿತು.