ನಟಿ ಆಲಿಯಾ ಭಟ್ ಅವರು ಕ್ವೀನ್ ಆಫ್ ಫ್ಯಾಷನ್ ಎಂದೇ ಫೇಮಸ್ ಆಗಿದ್ದಾರೆ. ಅವರು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುವಾಗ ಬೇರೆಯದೇ ರೀತಿಯಲ್ಲಿ ಕಾಣಿಸುತ್ತಾರೆ. ಈ ಬಾರಿ ಅವರು ಮೆಟ್ ಗಾಲಾ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ವೇಳೆ ಆಲಿಯಾ ಭಟ್ ಸಬ್ಯಸಾಚಿ ಸೀರೆ ಉಟ್ಟು ಗಮನ ಸೆಳೆದಿದ್ದಾರೆ ಅನ್ನೋದು ವಿಶೇಷ. ಈ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ ಎಂದು ಮಾಹಿತಿ ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಪಾಪರಾಜಿಗಳು ಆಲಿಯಾ ಭಟ್ ಹೆಸರನ್ನು ಕೂಗಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ‘ಆಲಿಯಾ ಭಟ್ ಅವರು ಅದ್ಭುತವಾಗಿ ಕಾಣಿಸುತ್ತಿದ್ದರು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ಆಲಿಯಾ ಭಟ್ ಅವರ ಸೀರೆಯನ್ನು ಹಾಡಿ ಹೊಗಳಿದ್ದಾರೆ.
ಮೆಟ್ ಗಾಲಾ ಎಂಬುದು ಪ್ರತಿ ವರ್ಷ ನ್ಯೂಯಾರ್ಕ್ನಲ್ಲಿ ನಡೆಯುವ ಒಂದು ಫ್ಯಾಷನ್ ಹಬ್ಬ. ಜಗತ್ತಿನ ಹಲವು ಖ್ಯಾತ ಸೆಲೆಬ್ರಿಟಿಗಳು ಈ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಅದ್ದೂರಿಯಾಗಿಯೇ ಮೆಟ್ ಗಾಲಾ ಆಯೋಜನೆಗೊಂಡಿದೆ. ಆಲಿಯಾ ಟ್ರೆಡಿಷನಲ್ ಲುಕ್ನಲ್ಲಿ ಎಂಟ್ರಿ ಕೊಟ್ಟಿದ್ದಾರೆ.