ನಿಮ್ಮ ಸುದ್ದಿ ಬಾಗಲಕೋಟೆ
ಸರಕಾರದ ತೀರ್ಮಾನದಂತೆ ಮಂಗಳವಾರದಿಂದ ಕಾಲೇಜ್ ತರಗತಿ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡದ ಸಂಗಮೇಶ್ವರ ಪದವಿ ಕಾಲೇಜ್ ಪ್ರಾಚಾರ್ಯ ಬಿ.ಬಿ.ಹೊಸಮನಿ ತಿಳಿಸಿದರು.
ಕಾಲೇಜ್‌ನಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತರಗತಿ ಕೋಣೆ, ಮೇಜು, ಡೆಸ್ಕ್, ಕುರ್ಚಿ ಸೇರಿದಂತೆ ಎಲ್ಲ ವಸ್ತುಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸರ್ ಮಾಡಿಸಲಾಗುತ್ತಿದೆ. ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆ ನಡೆಸುವ ಕುರಿತಂತೆ ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.
ಬಿಕಾಂ ಅಂತಿಮ ವರ್ಷದಲ್ಲಿ ೫೮ ಹಾಗೂ ಬಿಎ ಅಂತಿಮ ವರ್ಷದಲ್ಲಿ ೪೩ ವಿದ್ಯಾರ್ಥಿಗಳು ಓದುತ್ತಿದ್ದು ಕಾಲೇಜ್‌ಗೆ ಆಗಮಿಸುವವರು ಕಡ್ಡಾಯವಾಗಿ ಪಾಲಕರ ಒಪ್ಪಿಗೆ ಪತ್ರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಉಪಯೋಗ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಇನ್ನಿತರ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಉಪನ್ಯಾಸಕರಾದ ಎಂ.ಬಿ.ನೇಗಲಿ ಇದ್ದರು.