ಬಾಗಲಕೋಟೆ:
ತುಮಕೂರಿನಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದಲ್ಲಿ ನಡೆದ ಕರಾಟೆ (ಟೈಕೊಂಡ) ಕ್ರೀಡೆಯಲ್ಲಿ ಬಾಗಲಕೋಟೆಯ ಸರಕಾರಿ ಬಾಲಕಿಯರ ಬಾಲಮಂದಿರದ ಪ್ರಥಮ ಪಿಯುಸಿ ಕಲಾವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಅಂಬಿಕಾ ಬೋವೆರ್ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಬಾಲಕಿಯ ಸಾಧನೆಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ಸತ್ರ ನ್ಯಾಯಾಲಯದ ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಸಯ್ಯದ್ ಬಳೆಗೂರ ರೆಹಮಾನ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಅಮರೇಶ ಎಚ್, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಬೇವೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಸ್ತಗಿರಿಸಾಬ ಮುಲ್ಲಾ, ಬಾಲಮಂದಿರದ ಅಧೀಕ್ಷಕಿ ಜಯಮಾಲಾ ದೊಡಮನಿ ಅಭಿನಂದನೆ ಸಲ್ಲಿಸಿದ್ದಾರೆ.