This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsPolitics NewsState News

ರಾಯಚೂರು ಜಿಲ್ಲೆಗೆ ಭರಪೂರ ಅನುದಾನ

ರಾಯಚೂರು ಜಿಲ್ಲೆಗೆ ಭರಪೂರ ಅನುದಾನ

ರಾಯಚೂರು

ರಾಜ್ಯ ಸರಕಾರದ ಪ್ರಸಕ್ತ ಆಯವ್ಯಯ ಮಂಡನೆಯಲ್ಲಿ ಜಿಲ್ಲೆಗೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ 220 ಕೋಟಿ ಹಾಗೂ ಎಪಿಎಂಸಿಯಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕೆ 25 ಕೋಟಿ ರೂ. ಘೋಷಣೆ ಮಾಡಿದ್ದಾರೆ.

ಪ್ರಸಕ್ತ ಅಯ್ಯವ್ಯಯವನ್ನು ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ರಾಯಚೂರು ಜಿಲ್ಲೆಗೆ ಹೊಸ ಯೋಜನೆಗಳು ನೀಡಿದ್ದಾರೆ,

ಅವುಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶಿಥಿಲ ಗೃಹಗಳ ನಿರ್ಮಾಣಕ್ಕೆ 40 ಕೋಟಿ, ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಇತರೆ ಪ್ರದೇಶಗಳಿಗೆ ನಾರಾಯಣಪೂರ ಬಲದಂಡೆ ಕಾಲುವೆಯಿಂದ 990 ಕೋಟಿ ರೂ, ನೀರಾವರಿ ಕಲ್ಪಿಸುವ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ, ಚೀಕಲಪರ್ವಿ ಗ್ರಾಮದಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಜ್ ಕಂ ಬ್ಯಾರೆಜ್ ನಿರ್ಮಾಣ, ಕುರ್ಡಿ ಕೆರೆ ತುಂಬವ ಯೋಜನೆ,

ಜಿಲ್ಲಾಸ್ಪತ್ರೆಯಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ, ರಾಯಚೂರಿನಲ್ಲಿ ಮಹಿಳಾ ಮಿಲ್ಕ್ ಬ್ಯಾಂಕ್ ಸ್ಥಾಪನೆ, ಜವಳಿ ಪಾರ್ಕ್ ಸ್ಥಾಪನೆ, ವಿಜ್ಞಾನ ಕೇಂದ್ರ ತಾರಾಲಯ ಸ್ಥಾಪನೆ, ಮಂತ್ರಾಲಯ ಹತ್ತಿರದ ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸುವ ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ಬ್ರಿಜ್ ಕಂ ಬ್ಯಾರೆಜ್ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 158 ಕೋಟಿ ರೂ.ನಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.

";