ರಾಮನಗರ: ಮತದಾರರಿಗೆ ಅಮಿಶವೊಡ್ಡುವ ಕೆಲಸ ಕಾಂಗ್ರೆಸ್ ಮುಖಂಡರಿಂದ ಅವ್ಯಾಹತವಾಗಿ ಜಾರಿಯಲ್ಲಿದೆ ಎಂದು ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರು ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿದ್ದಾರೆ, ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲಾಗಿದೆ, ಮತದಾರರಿಹೆ ಕುಕ್ಕರ್ ಹಂಚಿದ ಸಂಗತಿಯನ್ನು ಈಗಾಗಲೇ ಮಾಧ್ಯಮ ಮತ್ತು ಚುನಾವಣಾ ಆಯೋಗದ ಗಮನಕ್ಕೆ ತರಲಾಗಿದೆ ಎಂದರು.
ಆಯೋಗ ಯಾವುದೇ ಕ್ರಮ ಜರುಗಿಸದ ಕಾರಣ, ಕಾಂಗ್ರೆಸ್ ನಾಯಕರು ತಮ್ಮ ಹಳೆಯ ಚಾಳಿಯನ್ನು ಮುಂದುವರಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗಿಫ್ಟ್ ಕಾರ್ಡ್ ಗಳನ್ನು ಹಂಚಿದ ಹಾಗೆ ಈಗಿನ ಲೋಕಸಭಾ ಚುನಾವಣೆಯಲ್ಲೂ ಹತ್ತ್ತತ್ತು ಸಾವಿರ ರೂ.ಗಳ ಕಾರ್ಡ್ ಗಳನ್ನು ಮತದಾರರಿಗೆ ಹಂಚುತ್ತಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ ಕಾರ್ಡ್ ಗಳ ಜಿರಾಕ್ಸ್ ಪ್ರತಿಗಳನ್ನು ತೋರಿಸಿದರು.
ಚುನಾವಣಾ ಆಯೋಗ ಚುನಾವಣೆಗಳನ್ನು ಹೀಗೆ ನಡೆಸುವ ಬದಲು ಮತದಾರರಿಗೆ ಹಣ ನೀಡಿ ವೋಟು ಹಾಕಿಸುವ ಪದ್ಧತಿಯನ್ನು ಜಾರಿಗೆ ತರಬೇಕು ಅಂತ ಕುಹುಕವಾಡಿದರು.