This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

International News

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನೆ ಗುರುವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಇಬ್ಬರು ಭಯೋತ್ಪಾದಕರನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಲಾಗಿದ್ದು, ತಂಗ್‌ಧರ್ ಸೆಕ್ಟರ್‌ನ ಬೇಲಿಯ ಇನ್ನೊಂದು ಬದಿಯಲ್ಲಿ ಶವಗಳು ಬಿದ್ದಿರುವುದು ಮಾಹಿತಿ ಕಂಡುಬಂದಿದೆ.

ಮೇ 20ರಂದು ಚುನಾವಣೆ ನಡೆಯಲಿರುವ ಕುಪ್ವಾರದ ಈ ಪ್ರದೇಶವು ಬಾರಾಮುಲ್ಲಾ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಶ್ರೀನಗರದಲ್ಲಿ ದಾಖಲೆ ಮಟ್ಟದ ಮತದಾನದ ನಂತರ, ಬಾರಾಮುಲ್ಲಾ ಮತ್ತು ಉತ್ತರ ಕಾಶ್ಮೀರದಲ್ಲಿ ಹೆಚ್ಚಿನ ಮತದಾನದ ಪ್ರಮಾಣವು ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಇನ್ನೊಂದು ಬದಿಯಲ್ಲಿ ಒಳನುಸುಳುತ್ತಿರುವ ಉಗ್ರರ 4 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ತಿಂಗಳು ಇದೇ ರೀತಿಯ ಘಟನೆಯಲ್ಲಿ, ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಎಲ್ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ ನಂತರ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು.

ಬಾರಾಮುಲ್ಲಾ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಉತ್ತರ ಕಾಶ್ಮೀರದ ಕುಪ್ವಾರದ ತಂಗ್‌ಧರ್ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭದ್ರತಾ ಪಡೆಗಳು ಪ್ರಮುಖ ಭಯೋತ್ಪಾದಕರ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಒಳನುಸುಳುವಿಕೆ ಯತ್ನವನ್ನು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ವಿಫಲಗೊಳಿಸಿತು.