ಮುಂಬೈ : ನಾಂದೇಡ್ ಸರ್ಕಾರಿ ಆಸ್ಪತ್ರೆಯ ಹಂಗಾಮಿ ಡೀನ್ ಕೈಯಲ್ಲಿ ಶೌಚಾಲಯ ಸ್ವಚ್ಛ ಮಾಡಿಸಿದ ಶಿವಸೇನಾ ಸಂಸದ ಹೇಮಂತ್ ಪಾಟೀಲ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾಗಿದೆ.
ಸಂಸದ ಪಾಟೀಲ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, ಭಾರತೀಯ ದಂಡ ಸಂಹಿತೆ ಮತ್ತು ಮಹಾರಾಷ್ಟ್ರ ವೈದ್ಯಕೀಯ ಸೇವಾ ವ್ಯಕ್ತಿಗಳು ಮತ್ತು ವೈದ್ಯಕೀಯ ಸೇವಾ ಸಂಸ್ಥೆಗಳ (ಹಿಂಸಾಚಾರ ಮತ್ತು ಹಾನಿ ಅಥವಾ ಆಸ್ತಿ ನಷ್ಟ ತಡೆಗಟ್ಟುವಿಕೆ) ಕಾಯ್ದೆಯ ಹಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
48 ಗಂಟೆಗಳಲ್ಲಿ 31 ರೋಗಿಗಳು ಸಾವನ್ನಪ್ಪಿದ ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಂಗಾಮಿ ಡೀನ್ ಅವರಿಗೆ ದುರ್ನಾತ ಬೀರುತ್ತಿದ್ದ ಶೌಚಾಲಯ ಮತ್ತು ಮೂತ್ರಾಲಯಗಳನ್ನು ಸ್ವಚ್ಛಗೊಳಿಸುವಂತೆ ಸಂಸದ ಪಾಟೀಲ್ ಒತ್ತಾಯಿಸಿದರು. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.