This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Education News

ಕೇಂದ್ರ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ಮಹತ್ವದ ಆದೇಶ: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ

ಕೇಂದ್ರ ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳಿಗೆ ಮಹತ್ವದ ಆದೇಶ: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ

ಕೇಂದ್ರ ಸರ್ಕಾರವು ಶಿಕ್ಷಣ ಸಂಸ್ಥೆಗಳಿಗೆ ಮಹತ್ವದ ಆದೇಶ ನೀಡಿದ್ದು, ಇದು ವಿದ್ಯಾರ್ಥಿಗಳ ಕಲಿಕೆಯ ಹಿತದೃಷ್ಟಿಯಿಂದ ಹೆಚ್ಚಿನ ಅನುಕೂಲ ವಾತಾವರಣ ಒದಗಿಸಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗಿನ ಎಲ್ಲ ಕೋರ್ಸ್‌ಗಳ ಪಠ್ಯವನ್ನು ಡಿಜಿಟಲ್ ರೂಪದಲ್ಲಿ ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಲ್ಲಿ ಒದಗಿಸುವಂತೆ ಕೇಂದ್ರ ಸರ್ಕಾರವು ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದು, ಇದಕ್ಕಾಗಿ 3 ವರ್ಷಗಳ ಗಡುವನ್ನು ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ನೀಡಿದೆ.ಶಾಲೆಗಳು, ಕಾಲೇಜುಗಳ ಹಂತದಲ್ಲಿ ವಿದ್ಯಾರ್ಥಿಗಳು ಅವರದ್ದೇ ಭಾಷೆಯಲ್ಲಿ ಕಲಿಯುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಶಿಕ್ಷಣ ಇಲಾಖೆಯು ಈ ಆದೇಶ ಹೊರಡಿಸಿದೆ.

ರಾಷ್ಟ್ರದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಬೆಳವಣಿಗೆಯಲ್ಲಿ ಭಾಷಾ ವೈವಿಧ್ಯವು ಬಹುದೊಡ್ಡ ಸಂಪನ್ಮೂಲವಾಗಲಿದೆ. ಇದರ ಬಳಕೆಯನ್ನು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪ್ರೋತ್ಸಾಹಿಸುತ್ತದೆ. ಸ್ಥಳೀಯ ಭಾಷೆಗಳಲ್ಲಿ ಕಲಿಕಾ ಸಾಮಾಗ್ರಿ ರಚನೆ ಭಾಷಾ ಸಮೃದ್ಧಿಗೆ ಕಾರಣವಾಗಲಿದೆ. ಆ ಮೂಲಕ ವಿಕಸಿತ ಭಾರತಕ್ಕೆ ಕೊಡುಗೆ ನೀಡಲಿದೆ ಎಂಬ ಆಶಯ ಹೊಂದಲಾಗಿದೆ.

ಸಂವಿಧಾನದ 8ನೇ ಪರಿಚ್ಛೇದಲ್ಲಿರುವ ಎಲ್ಲ ಭಾಷೆಗಳಲ್ಲೂ ಕಲಿಕಾ ಸಾಮಾಗ್ರಿಯನ್ನು ಒದಗಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.ವಿದ್ಯಾರ್ಥಿಗಳ ಕಲಿಕೆಗೆ ಭಾಷೆ ಅಡ್ಡಿ ಆಗಬಾರದು. ಶಿಕ್ಷಣದ ಎಲ್ಲ ಹಂತಗಳಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಕಲಿಕೆಗೆ ಉತ್ತೇಜನ ನೀಡುವ ಹಾಗೂ ಉತ್ತಮ ಕಲಿಕಾ ಫಲಗಳನ್ನು ಪಡೆಯುವ ರಾಷ್ಟ್ರೀಯ ಶಿಕ್ಷಣ ನೀತಿಯ ಶಿಫಾರಸಿನ ಅನ್ವಯ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

 

Nimma Suddi
";