This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Sports News

ಇಂಡಿಯಾಗೆ ಮತ್ತೊಂದು ಬಿಗ್ ಶಾಕ್: ಎರಡನೇ ಟೆಸ್ಟ್​ನಿಂದ ಹೊರಬಿದ್ದ ರವೀಂದ್ರ ಜಡೇಜಾ, ಕೆಎಲ್ ರಾಹುಲ್

ಇಂಡಿಯಾಗೆ ಮತ್ತೊಂದು ಬಿಗ್ ಶಾಕ್: ಎರಡನೇ ಟೆಸ್ಟ್​ನಿಂದ ಹೊರಬಿದ್ದ ರವೀಂದ್ರ ಜಡೇಜಾ, ಕೆಎಲ್ ರಾಹುಲ್

ಹೈದರಾಬಾದ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 28 ರನ್​ಗಳಿಂದ ಸೋತು ಮುಜುಗರಕ್ಕೆ ಒಳಗಾಗಿದ್ದ ಟೀಂ ಇಂಡಿಯಾಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಉಭಯ ತಂಡಗಳ ನಡುವೆ ವಿಶಾಖಪಟ್ಟಣದಲ್ಲಿ ನಡೆಯಲ್ಲಿರುವ ಎರಡನೇ ಟೆಸ್ಟ್ ಪಂದ್ಯದಿಂದ ತಂಡದ ಇಬ್ಬರು ಸ್ಟಾರ್ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಹೊರಬಿದ್ದಿದ್ದು, ಸ್ವತಃ ಈ ವಿಚಾರವನ್ನು ಬಿಸಿಸಿಐ ತನ್ನ ಅಧಿಕೃತ ಏಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೊಳಗಾಗಿದ್ದ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.

ಗಾಯದಿಂದಾಗಿ ತಂಡದಿಂದ ಹೊರಬಿದ್ದಿರುವ ಜಡೇಜಾ ಮತ್ತು ರಾಹುಲ್ ಬದಲಿಯಾಗಿ ಮೂವರು ಆಟಗಾರರನ್ನು ಬಿಸಿಸಿಐ ತಂಡಕ್ಕೆ ಆಯ್ಕೆ ಮಾಡಿದ್ದು, ಇಂಗ್ಲೆಂಡ್ ಲಯನ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಸರ್ಫರಾಜ್ ಖಾನ್​ಗೆ ಕೊನೆಗೂ ಟೀಂ ಇಂಡಿಯಾದ ಕದ ತೆರೆದಿದೆ. ರಾಹುಲ್ ಬದಲಿಗೆ ಸರ್ಫರಾಜ್ ಖಾನ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಆಲ್​ರೌಂಡರ್ ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದ್ದು, ಇವರಿಬ್ಬರಲ್ಲದೆ ಮೊದಲ ಟೆಸ್ಟ್ ಆರಂಭಕ್ಕೂ ಮುನ್ನವೇ ತಂಡದಿಂದ ಬಿಡುಗಡೆಯಾಗಿದ್ದ ವೇಗಿ ಅವೇಶ್ ಖಾನ್ ಬದಲಿಯಾಗಿ ಸೌರಭ್ ಕುಮಾರ್ ತಂಡಕ್ಕೆ ಆಯ್ಕೆಯಾಗಿದ್ದಾರೆ ಎಂದು ಮಾಹಿತ ಬೆಳಕಿಗೆ ಬಂದಿದೆ.

Nimma Suddi
";