ಜವಳಿ ಪಾರ್ಕ್ ಗೆ ಮನವಿ
ನಿಮ್ಮ ಸುದ್ದಿ ಬೆಂಗಳೂರು
ನವದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸರಣಿ ಸಮಾಲೋಚನೆ ನಡೆಸಿದರು.
ಜವಳಿ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ರಾಜ್ಯದ 3 ಕಡೆ ಮೆಗಾ ಜವಳಿ ಪಾರ್ಕ್ ಸ್ಥಾಪನೆಗೆ ಸಹಾಯ ಆನುದಾದಾನ ಕೇಳಿದರು.
ಈ ಮೂರು ಜಿಲ್ಲೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಮೀಪದಲ್ಲಿದ್ದು, ಎಲ್ಲಾ ಪ್ರಮುಖ ನಗರಗಳಿಗೆ ಹಾಗೂ ಬಂದರುಗಳಿಗೆ ಕೂಡ ಸಂಪರ್ಕವಿದೆ. ಈ ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದಾಗಿ ಜವಳಿ ಕೇಂದ್ರವಾಗಿ ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದೆ. ಪ್ರಧಾನಮಂತ್ರಿಗಳ ಕನಸಿನಂತೆ ಜವಳಿ ಕ್ಷೇತ್ರದಲ್ಲಿ ದೇಶ ಆತ್ಮನಿರ್ಭರ ಅಗಲು ಕೂಡ ಸಹಕಾರಿಯಾಗಲಿದೆ ಎಂದರು.
ವಿಜಯಪುರ, ತುಮಕೂರು ಹಾಗೂ ಕಲಬುರಗಿ ಜಿಲ್ಲೆಗಳು ಶೈಕ್ಷಣಿಕ ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಹೊಂದಿದ್ದು, ಕೌಶಲವುಳ್ಳ ಮಾನವ ಸಂಪನ್ಮೂಲಗಳನ್ನು ಜವಳಿ ಉದ್ಯಮಕ್ಕೆ ಒದಗಿಸಲು ಶಕ್ತವಾಗಿರುವುದರಿಂದ ಕೇಂದ್ರ ಸರ್ಕಾರದ ಮಿತ್ರಾ ಯೋಜನೆಯಡಿ ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸುವಂತೆ ಸಿಎಂ ಬೊಮ್ಮಾಯಿ ಕೇಂದ್ರ ಜವಳಿ ಖಾತೆ ಸಚಿವರಲ್ಲಿ ಮನವಿ ಮಾಡಿದರು.