ನಿಮ್ಮ ಸುದ್ದಿ ಬಾಗಲಕೋಟೆ
ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಪದವಿ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎ, ಬಿಎಸ್‍ಸಿ, ಬಿ.ಕಾಂ, ಎಲ್.ಎಲ್.ಬಿ, ಪ್ಯಾರಾಮೆಡಿಕಲ್, ಭಿ.ಪಾರ್ಮ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸಗಳು, ಎಂ.ಬಿ.ಬಿ.ಎಸ್, ಬಿಇ, ಬಿ.ಟೆಕ್ ಮತ್ತು ಸ್ನಾತಕೋತ್ತರ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ನೇಕಾರ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ನೇಕಾರ ಸಮ್ಮಾನ್ ಯೋಜನೆಯಡಿ ನೋಂದಾಯಿತ ಕೈಮಗ್ಗ ನೇಕಾರರು ಹಾಗೂ ಚಾಲ್ತಿಯಲ್ಲಿರುವ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಚಟುವಟಿಕೆಗಳ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರರ ಮಕ್ಕಳು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್, ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235463ಗೆ ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಎಂ.ಜಿ.ಕೊಣ್ಣೂರ ತಿಳಿಸಿದ್ದಾರೆ