This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಅರ್ಜಿ ಆಹ್ವಾನ: 2500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ.

ಅರ್ಜಿ ಆಹ್ವಾನ: 2500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ.

ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಮಿಕ್ಕಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳು ಇವೆ.

ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ನಿರ್ವಾಹಕ (ಕಂಡಕ್ಟರ್ )
ಹುದ್ದೆಗಳ ಸಂಖ್ಯೆ : 2500.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜಿಸಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ ರೂ.9,100 ನೀಡಲಾಗುವುದು.
ವಯಸ್ಸಿನ ಅರ್ಹತೆಗಳು
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 10-04-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ವರ್ಗಾವಾರು ಕೆಳಗಿನಂತೆ ಮೀರಿರಬಾರದು.
ಸಾಮಾನ್ಯ ವರ್ಗ – 35 ವರ್ಷಗಳು.
2A / 2B / 3A / 3B ಅಭ್ಯರ್ಥಿಗಳಿಗೆ 38 ವರ್ಷಗಳು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.
ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷಗಳು.

ಶೈಕ್ಷಣಿಕ ವಿದ್ಯಾರ್ಹತೆ
ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್. ಅಥವಾ 3 ವರ್ಷಗಳ ಡಿಪ್ಲೊಮ ಪಾಸ್‌.
ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿಯನ್ನು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳು ಮಾನ್ಯವಿಲ್ಲ. ಇವರು ಅರ್ಜಿ ಹಾಕಲು ಅರ್ಹರಲ್ಲ.ಅರ್ಹತೆ
ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರತಕ್ಕದ್ದು.
ಪುರುಷರ ಎತ್ತರ 160 CM, ಮಹಿಳೆಯರ ಎತ್ತರ 150 CM ಇರಬೇಕು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಮಾರ್ಚ್‌ 10 ರಂದು ತೋರಿಸುವ ಲಿಂಕ್‌ ಅನ್ನು ಆಯ್ಕೆ ಮಾಡಿ, ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

Nimma Suddi
";