This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – Supreme Court of India Recruitment 2024 – Complete Details

ಕೋರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – Supreme Court of India Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Supreme Court of India Recruitment 2024-2025 – Apply Online for 107 Personal Assistant Posts – ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 107 ಕೋರ್ಟ್ ಮಾಸ್ಟರ್, ಹಿರಿಯ ವೈಯಕ್ತಿಕ ಸಹಾಯಕ ಮತ್ತು ವೈಯಕ್ತಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Supreme Court of India Recruitment 2024 – ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 107 ಕೋರ್ಟ್ ಮಾಸ್ಟರ್, ಹಿರಿಯ ವೈಯಕ್ತಿಕ ಸಹಾಯಕ ಮತ್ತು ವೈಯಕ್ತಿಕ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Supreme Court of India Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು ಭಾರತೀಯ ಸುಪ್ರೀಂಕೋರ್ಟ್
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 107

ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)

ಉದ್ಯೋಗ ಸ್ಥಳ – ಭಾರತಾದ್ಯಂತ

ಹುದ್ದೆಗಳ ವಿವರ
ಕೋರ್ಟ್ ಮಾಸ್ಟರ್ : 31
ಹಿರಿಯ ವೈಯಕ್ತಿಕ ಸಹಾಯಕ : 33
ವೈಯಕ್ತಿಕ ಸಹಾಯಕ : 43
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
1. ಕೋರ್ಟ್ ಮಾಸ್ಟರ್ (ಸಂಕ್ಷಿಪ್ತ): 30 ರಿಂದ 45 ವರ್ಷ
2. ಹಿರಿಯ ವೈಯಕ್ತಿಕ ಸಹಾಯಕ: 18 ರಿಂದ 30 ವರ್ಷ
3. ವೈಯಕ್ತಿಕ ಸಹಾಯಕ: 18 ರಿಂದ 30 ವರ್ಷ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

 

1. ಕೋರ್ಟ್ ಮಾಸ್ಟರ್ (ಸಂಕ್ಷಿಪ್ತ) : ರೂ. 67,700/-
2. ಹಿರಿಯ ವೈಯಕ್ತಿಕ ಸಹಾಯಕ : ರೂ. 47,600/-
3. ವೈಯಕ್ತಿಕ ಸಹಾಯಕ : ರೂ. 44,900/-

 

ಆಯ್ಕೆ ವಿಧಾನ
ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Supreme Court of India Recruitment 2024

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 5 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಡಿಸೆಂಬರ್ 2024

ಪ್ರಮುಖ ಲಿಂಕುಗಳು
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

Nimma Suddi
";