This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಅರ್ಜಿ ಆಹ್ವಾನ: ಕೆಇಎ’ಇಂದ ನೀರು ಸರಬರಾಜು, ಒಳಚರಂಡಿ ಮಂಡಳಿಯ ಎಫ್‌ಡಿಎ, ಇಂಜಿನಿಯರ್ ನೇಮಕ

ಅರ್ಜಿ ಆಹ್ವಾನ: ಕೆಇಎ’ಇಂದ ನೀರು ಸರಬರಾಜು, ಒಳಚರಂಡಿ ಮಂಡಳಿಯ ಎಫ್‌ಡಿಎ, ಇಂಜಿನಿಯರ್ ನೇಮಕ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಬೆಂಗಳೂರು ಹುದ್ದೆಗಳಿಗೆ ಸವಿವರ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ನಡೆಸಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಉದ್ಯೋಗ ಇಲಾಖೆ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.

ಹುದ್ದೆಗಳ ವಿವರ
ಸಹಾಯಕ ಇಂಜಿನಿಯರ್ (ಸಿವಿಲ್) : 50 (RPC 43+ 07HK)
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) : 14 (11RPC+ 03HK)
ಒಟ್ಟು ಹುದ್ದೆಗಳ ಸಂಖ್ಯೆ : 64

ಹುದ್ದೆವಾರು ವೇತನ ಶ್ರೇಣಿ
ಸಹಾಯಕ ಇಂಜಿನಿಯರ್ (ಸಿವಿಲ್) : Rs.43100-83900.
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) : Rs.27650-52650.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-02-2024
ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-03-2024
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 14-03-2024

ಅರ್ಜಿ ಶುಲ್ಕ ವಿವರ
ಸಾಮಾನ್ಯ ಅರ್ಹತೆ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500.
ಮಾಜಿ ಸೈನಿಕ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ರೂ.500.

ಹುದ್ದೆವಾರು ಶೈಕ್ಷಣಿಕ ಅರ್ಹತೆ
ಸಹಾಯಕ ಇಂಜಿನಿಯರ್ (ಸಿವಿಲ್) : ಬಿಇ / ಬಿ.ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು.
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) : ಬಿ.ಕಾಂ ಪದವಿ ಪಡೆದಿರಬೇಕು.

ವಯಸ್ಸಿನ ಅರ್ಹತೆಗಳು
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು.
ಪ್ರವರ್ಗ 2A, 2B, 3A, 3B, ಅಭ್ಯರ್ಥಿಗಳಿಗೆ 38 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ , ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರುವರಿ 10 ರಿಂದ ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗುವ ಆನ್‌ಲೈನ್‌ ಲಿಂಕ್‌ ಮೂಲಕ ಅಪ್ಲಿಕೇಶನ್‌ ಸಲ್ಲಿಸಬೇಕು.

";