ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ ೨ ಪಟ್ಟಣ ಪಂಚಾಯಿತಿಗಳಿಗೆ ನೂತನ ಮುಖ್ಯಾಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯಿತಿಗೆ ಗದಗ ಜಿಲ್ಲೆಯ ನರೇಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ ನಿಡಶೇಶಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಸದ್ಯ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಅವರಿಗೆ ಯಾವುದೇ ಸ್ಥಳ ನಿಯುಕ್ತಿಗೊಳಿಸಿಲ್ಲ. ಬದಲಾಗಿ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ನೂತನವಾಗಿ ರಚಿತವಾದ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣ ಪಂಚಾಯಿತಿಗೆ ಮುಧೋಳ ನಗರಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾರುತಿ ನಡುವಿನಕೇರಿ ಅವರನ್ನು ವರ್ಗಾವಣೆಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.