ಬಾಗಲಕೋಟೆ
ಬೆಂಗಳೂರಿನಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ ಮಾದರಿಯಂತೆ ಬಾಗಲಕೋಟೆಯಲ್ಲಿ ಆರ್ಟ್ ಗ್ಯಾಲರಿ ನಿರ್ಮಾಣ ಮಾಡುವ ಯೋಜನೆ ಇದೆ ಎಂದು ಬವಿವ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ನಗರದ ಬವಿವ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ವಿಜಯಪುರದ ಸೋಮಶೇಖರ ಸಾಲಿ ಪ್ರತಿಷ್ಠಾನದ ಸಹಯೋಗದಲ್ಲಿ
ಸೋಮಶೇಖರ ಸಾಲಿ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಎರಡು ದಿನಗಳ ಕಾಲ ನಡೆದ ಚಿತ್ರಪ್ರದರ್ಶ ವೀಕ್ಷಿಸಿ ಅವರು ಮಾತನಾಡಿದರು.
ಬಾಗಲಕೋಟೆಯವರಾದ ಸೋಮಶೇಖರ ಸಾಲಿ ಅವರು ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಶ್ರೇಷ್ಠ ಕಲಾವಿದರಾಗಿದ್ದರು. ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿ, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಉಪಾಧ್ಯಕ್ಷರಾಗಿ ಜಿಲ್ಲೆಗೆ ಕೀರ್ತಿ ತಂದವರು. ಅವರ ಕಲಾಕೃತಿಗಳನ್ನು ಪ್ರದರ್ಶನ ಮಾಡಿದ್ದು ಶ್ಲಾಘನಿಯ ಎಂದರು.
ಬಾಗಲಕೋಟೆ ಕಲಾ ಪರಂಪರೆಯ ನಗರವಾಗಿದ್ದು ಜಿಲ್ಲೆಯಲ್ಲಿ ಸಾಕಷ್ಟು ಹೆಸರಾಂತ ಚಿತ್ರಕಲಾವಿದರಿದ್ದಾರೆ. ಅವರ ಕಲಾಕೃತಿಗಳ ಪ್ರದರ್ಶನಕ್ಕೆ ಜಿಲ್ಲೆಯಲ್ಲಿ ಉತ್ತಮ ಆರ್ಟ್ ಗ್ಯಾಲರಿ ಅಗತ್ಯತೆ ಇದ್ದು, ಬೆಂಗಳೂರಿನಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ ಮಾದರಿಯಂತೆ ಬಾಗಲಕೋಟೆಯಲ್ಲಿ ಆರ್ಟ್ ಗ್ಯಾಲರಿ ನಿರ್ಮಾಣ ಯೋಜನೆ ಇದೆ ಎಂದರು.
ವಿದ್ಯಾಧರ ಸಾಲಿ, ಮಹಾಗುಂಡಯ್ಯ ಸಾಲಿ, ನೀತಿನ ಸಾಲಿಮಠ, ಬಸವರಾಜ ಗೌಡರ ಇದ್ದರು.