This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಒತ್ತಡ ಬಂದಷ್ಟು ಬೇಗ ಪೆನ್ ಡ್ರೈವ್ ಹೊರಬರುತ್ತದೆ

ಒತ್ತಡ ಬಂದಷ್ಟು ಬೇಗ ಪೆನ್ ಡ್ರೈವ್ ಹೊರಬರುತ್ತದೆ

ಅಥಣಿ(ಬೆಳಗಾವಿ) : “ನನ್ನ ಹತ್ತಿರ ಪೆನ್‌ಡ್ರೈವ್ ಇರೋದು ಕಟು ಸತ್ಯ. ಸಂದರ್ಭ ಬಂದಾಗ ರಿಲೀಸ್ ಮಾಡುತ್ತೇನೆ” ಎಂದು ಮಾಜಿ ಡಿಸಿಎಂ ಹಾಲಿ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆಅತನಾಡಿದ ಅವರು, “ಸಮಯ ಸಂದರ್ಭ ಬಂದಾಗ ಪೆನ್ ಡ್ರೈವ್ ಹೊರಬರುತ್ತದೆ. ನನ್ನ ಮೇಲೆ ಎಷ್ಟು ಒತ್ತಡ ಹೆಚ್ಚಾಗುತ್ತದೆಯೋ ಅಷ್ಟು ಬೇಗ ರಿಲೀಸ್ ಮಾಡುತ್ತೇನೆ. ಪೆನ್ ಡ್ರೈವ್ ಯಾವ ಪಕ್ಷಕ್ಕೆ ಸೇರಿದ್ದು ಎಂಬುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ” ಎಂದರು.
…………

ಬಿಜೆಪಿ ಅನುದಾನ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಸವದಿ ಸವಾಲು

ಅಥಣಿ‌ (ಬೆಳಗಾವಿ): “ಈ ಹಿಂದಿನ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿಯೇ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಆಗಿದೆ. ಇಂತಹ ಸಾಮಾನ್ಯ ಜ್ಞಾನವೂ ಇಲ್ಲದೆ ಮಾತನಾಡುವುದು ಹಾಸ್ಯಾಸ್ಪದ” ಎಂದು ಶಾಸಕ ಲಕ್ಷ್ಮಣ ಸವದಿ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಆರೋಪಕ್ಕೆ ತಿರುಗೇಟು ನೀಡಿದರು.
ಪಶು ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣಕ್ಕೆ ಬಿಜೆಪಿ ಸರಕಾರದಿಂದ ಅನುದಾನ ಬಿಡುಗಡೆ ಆಗಿತ್ತು. ಬಿಜೆಪಿ ಅನುದಾನದ ಪ್ರಚಾರ ಕಾಂಗ್ರೆಸ್ ಪಡೆದುಕೊಳ್ಳುತ್ತಿದೆ’ ಎನ್ನುವ ಮಾಜಿ ಶಾಸಕ ಮಹೇಶ್ ಕುಮಠಳ್ಳಿ ಹೇಳಿಕೆಗೆ ವಿಷಯವಾಗು ಪ್ರತಿಕ್ರಯಿಸಿದ ಲಕ್ಷ್ಮಣ ಸವದಿ, “ಅನುಭವದ ಕೊರತೆಯಿಂದ ಮಹೇಶ್ ಕುಮಠಳ್ಳಿ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಅನುದಾನ ಬಿಡುಗಡೆ ಆಗಿತ್ತು. ಈ ಸಂಗತಿ ಕುಮಠಳ್ಳಿಗೆ ಗೊತ್ತಿಲ್ಲ. ಇತಿಹಾಸ ತಿಳಿಯದವರಿಂದ ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ಯಾವುದೇ ಪಕ್ಷದ ಸರಕಾರ ಇರಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸ್ವತಃ ಸರಕಾರವೇ ಅನುದಾನ ಮಂಜೂರು ಮಾಡುತ್ತದೆ. ಅದು ಸಾರ್ವಜನಿಕರ ದುಡ್ಡು ಯಾವುದೇ ಖಾಸಗಿಯ ವ್ಯಕ್ತಿಯಿಂದ ಬಂದದ್ದಲ್ಲ. ನಾನು ಕೆಳಮಟ್ಟದ ರಾಜಕಾರಣ ಮಾಡುವ ವ್ಯಕ್ತಿಯಲ್ಲ‌. 2700 ಕೋಟಿ ರೂ.ಗಳ ಅನುದಾನದಲ್ಲಿ ಅಥಣಿ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಆಗುತ್ತಿರುವುದು ಬಿಜೆಪಿ ಕಾಲಾವಧಿಯಲ್ಲಿ ಮಂಜೂರಾದ ಅನುದಾನದಿಂದ ಎಂದು ದಾಖಲೆ ಸಮೇತ ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ” ಎಂದು ಸವಾಲು ಹಾಕಿದರು.
…..

";