This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಪೊಲೀಸ್ ಠಾಣೆ ಮೇಲೆ ದಾಳಿ, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ: ಡಿಕೆಶಿ

ಪೊಲೀಸ್ ಠಾಣೆ ಮೇಲೆ ದಾಳಿ, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ: ಡಿಕೆಶಿ

ಬೆಂಗಳೂರು: ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿ, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ನಡೆದಿದೆ ಎಂದು ಆರೋಪಿಸಿ ಗುಂಪೊಂದು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿತ್ತು. ಅಲ್ಲದೆ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಗೂ ಹಾನಿ ಉಂಟಾಗಿದೆ.

ಅಲ್ಲದೆ ಹಲವು ವಾಹನಗಳು ಧ್ವಂಸಗೊಂಡಿವೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಕ್ಕೂ ಹೆಚ್ಚು ಜನರನ್ನು ಬಂಧನ ಮಾಡಲಾಗಿದೆ. ಅಲ್ಲದೆ, ಈ ನಡುವೆ ಚನ್ನಗಿರಿಯಲ್ಲಿ ಲಾಕಪ್ ಡೆತ್ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ.

ಚನ್ನಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದಾಗ, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

Nimma Suddi
";