ಮಾಲ್ಡಾ (ಪಶ್ಚಿಮ ಬಂಗಾಳ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಬಿಹಾರ ರಾಜ್ಯದಿಂದ ಪಶ್ಚಿಮ ಬಂಗಾಳ ರಾಜ್ಯಕ್ಕೆ ಎಂಟ್ರಿ ಕೊಟ್ಟ ಸಂದರ್ಭದಲ್ಲಿ ಯಾತ್ರೆ ಮೇಲೆ ದಾಳಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ,
ಪಶ್ಚಿಮ ಬಂಗಾಳ ರಾಜ್ಯದ ಮಾಲ್ಡಾದಲ್ಲಿ ಈ ಘಟನೆ ನಡೆದಿದ್ದು, ಮೊದಲ ಬಾರಿಗೆ ರಾಹುಲ್ ಗಾಂಧಿ ಅವರ ಭಾರತ್ ಜೊಡೋ ಯಾತ್ರೆ ಅಸ್ಸಾಂ ಮಾರ್ಗವಾಗಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ್ದು, ಬಳಿಕ ಬಿಹಾರ ರಾಜ್ಯಕ್ಕೆ ಎಂಟ್ರಿ ಕೊಟ್ಟ ಯಾತ್ರೆ ಮತ್ತೆ ಎರಡನೇ ಬಾರಿಗೆ ಪಶ್ಚಿಮ ಬಂಗಾಳ ರಾಜ್ಯದ ಮಾಲ್ಡಾಗೆ ಆಗಮಿಸಿದ ವೇಳೆ ಯಾತ್ರೆ ಮೇಲೆ ದಾಳಿ ನಡೆಸಲಾಗಿದೆ.
ರಾಹುಲ್ ಗಾಂಧಿ ಅವರು ಸಾಗುತ್ತಿದ್ದ ಭಾರತ್ ಜೋಡೋ ನ್ಯಾಯ ಯಾತ್ರೆಯ ಕಾರಿನ ಹಿಂಭಾಗದ ಕಿಟಕಿಗೆ ಕಲ್ಲು ತೂರಿದ ಪರಿಣಾಮ, ಗಾಜ ಪುಡಿ ಪುಡಿಯಾಗಿದೆ. ಈ ದಾಳಿ ವೇಳೆ ರಾಹುಲ್ ಗಾಂಧಿ ಅವರಿಗೆ ಯಾವುದೇ ಅಪಾಯವಾಗಿಲ್ಲ. ದಾಳಿ ಬಳಿಕ ರಾಹುಲ್ ಗಾಂಧಿ ಅವರು ಸಲೀಸಾಗಿ ಕಾರಿನಿಂದ ಹೊರಗೆ ಇಳಿದು ಬಂದು ನಡೆದು ಸಾಗಿಸಿದ್ದು, ದಾಳಿ ನಡೆಸಿದ್ದು ಯಾರು ಅನ್ನೋದು ಗೊತ್ತಾಗಿಲ್ಲ. ಈವರೆಗೆ ಯಾರೂ ದಾಳಿಯ ಹೊಣೆ ಹೊತ್ತಿಲ್ಲ.