This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಮನುಕುಲಕ್ಕೆ ಬಾಬು ಜಗಜೀವನರಾಂ ಕೊಡುಗೆ ಅಪಾರ

ನಿಮ್ಮ ಸುದ್ದಿ ಬಾಗಲಕೋಟೆ

ಸಮಾಜದ ಕೆಳಸ್ತರದಲ್ಲಿ ಹುಟ್ಟಿ ಬದುಕನ್ನೆ ಸವಾಲಾಗಿ ಸ್ವೀಕರಿಸಿ, ಮನುಕುಲಕ್ಕೆ ಮಾದರಿ ಎನ್ನುವಂತಹ ಅಪರ ಕೊಡುಗೆಯನ್ನು ಬಾಬು ಜಗಜೀವನರಾಂ ಅವರು ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.

ನವನಗರದ ಬಾಬು ಜಗಜೀವನರಾಂ ಅವರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡು ಡಾ.ಬಾಬು ಜಗಜೀವರಾಂ ಅವರ 115ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಜೀವದುದ್ದಕ್ಕೂ ಎಲ್ಲ ಸಮುದಾಯ ವರ್ಗಗಳ ಏಳಿಗೆಗಾಗಿ ಜಗಜೀವನರಾಂ ಅವರು ಶ್ರಮಿಸಿದ್ದಾರೆ ಎಂದರು.
ಸ್ವಾತಂತ್ರ್ಯದ ಪೂರ್ವದಲ್ಲಿ ಅನೇಕ ಸಮಾಜ ಸುಧಾರಕರು ಸ್ವಾಭಿಮಾನಿ ರಾಷ್ಟ್ರ ಕಟ್ಟುವಲ್ಲಿ ಶ್ರಮಿಸಿದ್ದಾರೆ.

ಅದರಲ್ಲಿ ಬಾಬು ಜಗಜೀವನರಾಂ ಒಬ್ಬರಾಗಿದ್ದು, ಅಷ್ಪøಶ್ಯತೆ ತಾಂಡವಾಡುತ್ತಿರುವ ಬಿಹಾರದ ಆ ದಿನಗಳಲ್ಲಿ ಮದ್ಯಮ ಆದಾಯದ ಕುಟುಂಬದಿಂದ ಬಂದಂತಹ ಜಗಜೀನವರಾಂ ಅವರು ತಮ್ಮ ಶಿಕ್ಷಣವನ್ನು ಪೂರೈಸಿ ದೇಶವ್ಯಾಪಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದವರಾಗಿದ್ದಾರೆ. ಅಷ್ಪøಶ್ಯತೆಯನ್ನು ಹೊಡೆದೋಡಿಸಲು ಸಾಕಷ್ಟು ಶ್ರಮಿಸಿದವರಾಗಿದ್ದಾರೆ ಎಂದರು.

ದೇಶದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಿ, ಶೋಷಿತ ವರ್ಗದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ರಾಜಕೀಯ ಪ್ರವೇಶ ಮಾಡಿದರು. ಎರಡು ಬಾರಿ ಅವಿರೋದವಾಗಿ ಆಯ್ಕೆಯಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದರು. ದೇಶದ ಅಭಿವೃದ್ದಿ ಜೊತೆಗೆ ಶೋಷಿತ ಸಮುದಾಯವನ್ನು ಏಳಿಗೆ, ಶೋಷನೆ ರಹಿತ ಸಮಾಜವನ್ನು ಕಟ್ಟುವ ಸಂಕಲ್ಪ ಬಾಬು ಜಗಜೀವನರಾಂ ಅವರದಾಗಿತ್ತು ಎಂದರು.

ಬಾಬು ಜಗಜೀವನರಾಂ ಅವರು ಸ್ವಾಭಿಮಾನ ಭಾರತಕ್ಕಾಗಿ ಆಹಾರ ಸಮತೋಲ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಸಿರು ಕ್ರಾಂತಿ ಹುಟ್ಟುಹಾಕಿದರೋ ಅದೇ ರೀತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವಾವಲಂಬಿ ಭಾರತಕ್ಕೆ ಆತ್ಮ ನಿರ್ಭರ ಭಾರತ ಯೋಜನೆಯನ್ನು ಹುಟ್ಟುಕಾರಿದ್ದಾರೆಂದರು. ಆದ್ದರಿಂದ ಹಿಂದಿನ ಮಹಾತ್ಮರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೇಲ್ಲರೂ ನಡೆಯಬೇಕಾಗಿದೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ್ದ ಧಾವರಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾದ್ಯಾಪಕ ಡಾ.ನಿಂಗಪ್ಪ ಮುದೇನೂರ ಮಾತನಾಡಿ ಬಾಬು ಜಗಜೀವನರಾಂ ಶೋಷಿತ ಮತ್ತು ದುರ್ಬಲರ ವರ್ಗದವರಿಗೂ ತಮ್ಮ ಜೀವನವನ್ನೇ ಮೀಸಲಾಗಿಟ್ಟಿದ್ದರು. ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಹಸಿರುಕ್ರಾಂತಿಗೆ ಕಾರಣರಾಗಿದ್ದಾರೆ. ಮಹಾತ್ಮರ ಸ್ಮರಣೆಯಿಂದ ಮುಕ್ತಿ ಸಿಗುತ್ತದೆ. ಉತ್ತಮ ಸಂಸದೀಯ ಪಟುವಾಗಿದ್ದ ಜಗಜೀವನರಾಂ ಅವರು ಹಕ್ಕು ಮತ್ತು ಸ್ವಾಂತ್ರ್ಯಕ್ಕೆ ಚ್ಯುತಿ ಬಂದಾಗ ಹೋರಾಟದ ಹಾದಿ ಅನಿವಾರ್ಯವೆನ್ನುತ್ತಿದ್ದರು. ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಯುಕೆಪಿ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಜಿ.ಪಂ ಉಪಕಾರ್ಯದರ್ಶಿ ಶಿದ್ರಾಮೇಶ್ವರ ಉಕ್ಕಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ರಾಜ್ಯ ಸರಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ಬಳ್ಳಾರಿ ಸೇರಿದಂತೆ ಸಮುದಾಯದ ಮುಖಂಡರಾದ ಯಲ್ಲಪ್ಪ ಬೇಂಡಿಗೇರಿ, ವಾಯ್.ವಾಯ್.ತಿಮ್ಮಾಪೂರ, ವಾಯ್.ಸಿ.ಕಾಂಬಳೆ, ಹನಮಂತ ಚಿಮ್ಮಲಗಿ, ಪರಶುರಾಮ ಸನಕ್ಯಾನವರ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಸ್ವಾಗತಿಸಿದರು.

*ಜಗಜೀವನರಾಂ ಅದ್ದೂರಿ ಭಾವಚಿತ್ರ ಮೆರವಣಿಗೆ*
——————————–
ಬಾಬು ಜಗಜೀವನರಾಂ ಅವರ 115ನೇ ಜನ್ಮದಿನೋತ್ಸವ ಅಂಗವಾಗಿ ನವನಗರದ ಸೆಕ್ಟರ ನಂ.12 ರಲ್ಲಿರುವ ದುರ್ಗಾದೇವಿ ದೇವಸ್ಥಾನದಲ್ಲಿ ಜಗಜೀವನರಾಂ ಭಾವಚಿತ್ರ ಶಾಸಕ ವೀರಣ್ಣ ಚರಂತಿಮಠ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ದುರ್ಗಾದೇವಿ ದೇವಸ್ಥಾನದಿಂದ ಪ್ರಾರಂಭವಾಗಿ ವಿವಿಧ ಜಾನಪದ ಕಲಾತಂಡಗಳ ಮೂಲಕ ನಾನಾ ಕಡೆ ಸಂಚರಿಸಿ ಜಗಜೀವನರಾಂ ಭವನಕ್ಕೆ ಮುಕ್ತಾಯಗೊಂಡಿತು. ಕುಂಬ ಹೊತ್ತ ಮಹಿಳೆಯರ ಸಾಲು ಮೆರವಣಿಗೆಯ ಆಕರ್ಷಕ ಕೇಂದ್ರಬಿಂದುವಾಗಿತ್ತು. ಮೆರವಣಿಗೆಯಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

*ಹೊಲಿಗೆ ಯಂತ್ರ ವಿತರಣೆ*
—————–
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಜಗಜೀವನರಾಂ ಚರ್ಮ ಮತ್ತು ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ 60 ದಿನಗಳ ಕಾಲ ತರಬೇತಿ ಹೊಂದಿದ 20 ಜನ ಮಹಿಳಾ ಫಲಾನುಭವಿಗಳಿಗೆ ಹೊಲಿಗೆಯಂತ್ರಗಳನ್ನು ಬುಡಾ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ ವಿತರಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ಸಮುದಾಯ ಮುಖಂಡರು ಇದ್ದರು.

Nimma Suddi
";