ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಯಾವುದೇ ತೃತೀಯ ರಂಗ ಅಥವಾ ಯಾರೊಂದಿಗಾದರೂ ಮೈತ್ರಿ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳಿಗೂ ಅವರು ತೆರೆ ಎಳೆದಿದ್ದು, ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಶನಿವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ಘೋಷಣೆ ಮಾಡಿದ್ದು, ಈ ಪೋಸ್ಟ್‌ನಲ್ಲಿ ಅವರು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು.
ಬಿಎಸ್‌ಪಿ ತನ್ನ ಸ್ವಂತ ಬಲದ ಮೇಲೆ ಸಂಪೂರ್ಣ ಸಿದ್ಧತೆ ಮತ್ತು ಶಕ್ತಿಯೊಂದಿಗೆ ದೇಶದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುತ್ತಿದೆ ಎಂದು ಮಾಯಾವತಿ ಬರೆದಿದ್ದು, ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಮೈತ್ರಿ ಅಥವಾ ತೃತೀಯ ರಂಗ ರಚನೆಯ ಬಗ್ಗೆ ವದಂತಿಗಳನ್ನು ಹರಡುವುದು ಸಂಪೂರ್ಣ ಸುಳ್ಳು ಮತ್ತು ತಪ್ಪು ಸುದ್ದಿಯಾಗಿದ್ದು, ಇಂತಹ ಕಿಡಿಗೇಡಿ ಸುದ್ದಿಗಳನ್ನು ನೀಡಿ ಮಾಧ್ಯಮಗಳು ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳಬಾರದು. ಜನರೂ ಎಚ್ಚರಿಕೆ ವಹಿಸಬೇಕು.
ವಿಶೇಷವಾಗಿ ಉತ್ತರಪ್ರದೇಶದಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದ್ದು, ಪ್ರತಿಪಕ್ಷಗಳು ಸಾಕಷ್ಟು ಚಂಚಲತೆ ತೋರುತ್ತಿದ್ದು, ಆದ್ದರಿಂದಲೇ ದಿನವೂ ನಾನಾ ರೀತಿಯ ವದಂತಿಗಳನ್ನು ಹಬ್ಬಿಸಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಆದರೆ ಬಹುಜನ ಸಮುದಾಯದ ಹಿತದೃಷ್ಟಿಯಿಂದ ಏಕಾಂಗಿಯಾಗಿ ಚುನಾವಣೆ ಎದುರಿಸುವ ಬಿಎಸ್‌ಪಿ ನಿರ್ಧಾರ ದೃಢವಾಗಿದೆ ಎಂದು ಮಾಹಿತಿ ಕಂಡು ಬಂದಿದೆ.