This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

National NewsState News

ಮೇ 31ರವರೆಗಿಲ್ಲ ವಿಐಪಿ ದರ್ಶನ: ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಮೇ 31ರವರೆಗಿಲ್ಲ ವಿಐಪಿ ದರ್ಶನ: ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಉತ್ತರಾಖಂಡದಲ್ಲಿ ಚಾರ್​ ಧಾಮ್ ಯಾತ್ರೆಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

ದೇವಾಲಯದಗಳ 50 ಮೀಟರ್​ ವ್ಯಾಪ್ತಿಯಲ್ಲಿ ಯಾರೂ ರೀಲ್ಸ್​ಗಳನ್ನು ಮಾಡುವಂತಿಲ್ಲ ಎನ್ನುವ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ. ಕೇದಾರನಾಥ, ಬದರಿನಾಥ್, ಯಮುನೋತ್ರಿ ಮತ್ತು ಗಂಗೋತ್ರಿಯಲ್ಲಿ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ನಿರ್ಧರಿಸಿದೆ.

ಕೆಲವು ಯಾತ್ರಾರ್ಥಿಗಳಿಂದ ದೇವಾಲಯಗಳ ಆವರಣದಲ್ಲಿ ವೀಡಿಯೊಗ್ರಫಿ ಮಾಡಲಾಗುತ್ತಿದೆ ಮತ್ತು ರೀಲ್ಸ್​ಗಳನ್ನು ಮಾಡಲಾಗುತ್ತಿದೆ, ಇದರಿಂದಾಗಿ ಜನರು ಒಂದೇ ಸ್ಥಳದಲ್ಲಿ ಸೇರುತ್ತಾರೆ, ಇದರಿಂದ ಅನನುಕೂಲತೆ ಉಂಟಾಗುತ್ತದೆ ಎಂದು ರಾತುರಿ ಹೇಳಿದರು.

ಮೇ 10 ರಂದು (ಶುಕ್ರವಾರ) ಚಾರ್ ಧಾಮ್ ಯಾತ್ರೆ ಆರಂಭವಾಗಿದೆ. ತೀರ್ಥಯಾತ್ರೆಯ ಮೊದಲ ಆರು ದಿನಗಳಲ್ಲಿ, ಬುಧವಾರದವರೆಗೆ, ಭಾರತ ಮತ್ತು ವಿದೇಶಗಳಿಂದ ಕನಿಷ್ಠ 3,34,732 ಜನರು ಪ್ರಾರ್ಥನೆ ಸಲ್ಲಿಸಲು ದೇಗುಲಗಳಿಗೆ ಭೇಟಿ ನೀಡಿದ್ದಾರೆ. ಯಾತ್ರೆಗೆ ಏಪ್ರಿಲ್ 25 ರಂದು ನೋಂದಣಿ ಆರಂಭವಾಗಿದ್ದು, ಗುರುವಾರ ಸಂಜೆಯವರೆಗೆ 27 ಲಕ್ಷಕ್ಕೂ ಹೆಚ್ಚು ಭಕ್ತರು ನೋಂದಣಿ ಮಾಡಿಕೊಂಡಿದ್ದಾರೆ.

ಹರಿದ್ವಾರ ಮತ್ತು ರಿಷಿಕೇಶದಲ್ಲಿ ಆಫ್‌ಲೈನ್ ನೋಂದಣಿ ಮೇ 19 (ಭಾನುವಾರ)ದವರೆಗೆ ಮುಚ್ಚಿರುತ್ತದೆ ಎಂದು ಮುಖ್ಯ ಕಾರ್ಯದರ್ಶಿ ರಾಧಾ ರತುರಿ ತಿಳಿಸಿದ್ದಾರೆ. ದೇವಾಲಯಗಳ 50 ಮೀಟರ್ ವ್ಯಾಪ್ತಿಯಲ್ಲಿ ವಿಡಿಯೋಗ್ರಫಿ ಮತ್ತು ಸಾಮಾಜಿಕ ಮಾಧ್ಯಮ ರೀಲ್‌ಗಳ ಮೇಕಿಂಗ್ ಮೇಲೆ ನಿಷೇಧ ಹೇರಲಾಗಿದೆ ಎಂದು ಮಾಹಿತಿ ಬೆಳಕಿಗೆ ಬಂದಿದೆ.

Nimma Suddi
";