This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Crime News

ಬೆಂಗಳೂರು: ಓವರ್ ಟೇಕ್ ಮಾಡಲು ಬಿಡಲಿಲ್ಲವೆಂದು ಹೆಲ್ಮೆಟ್​ನಿಂದ ಕಾರಿನ ಮೇಲೆ ಹಲ್ಲೆ

ಬೆಂಗಳೂರು: ಓವರ್ ಟೇಕ್ ಮಾಡಲು ಬಿಡಲಿಲ್ಲವೆಂದು ಹೆಲ್ಮೆಟ್​ನಿಂದ ಕಾರಿನ ಮೇಲೆ ಹಲ್ಲೆ

ಬೆಂಗಳೂರು: ದಂಪತಿ ಮತ್ತು ಅವರ ಮೂರು ವರ್ಷದ ಮಗಳು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ರೊಚ್ಚಿಗೆದ್ದ ಬೈಕ್ ಸವಾರ ಏಕಾಏಕಿ ಕಾರು ಚಾಲಕನ ಮೇಲೆ ದಾಳಿ ನಡೆಸಿದ್ದಾನೆ. ಘಟನೆ ಸಂಬಂಧ ಕಾರು ಮಾಲೀಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕಿರಿಕ್​ನ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಬೈಕ್ ಚಾಲಕ ಕುಟುಂಬ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟುವುದನ್ನು ಕಾಣಬಹುದು.

ಕೇರಳ ಮೂಲದ ಐಟಿ ವೃತ್ತಿಪರ ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ ಮಗಳ ಜೊತೆ ಸರ್ಜಾಪುರ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಈ ಘಟನೆ ಸಂಭವಿಸಿದೆ. ಇನ್ನು ಘಟನೆಯಲ್ಲಿ ಬೈಕ್ ಚಾಲಕ ಕಾರಿನ ಗ್ಲಾಸ್ ಒಡೆದು ಹಾಕಿದ್ದು ಕಾರಿನೊಳಗಿದ್ದ ಮಗಳಿಗೆ ಗಾಯಗಳಾಗಿವೆ ಎಂದು ಅಖಿಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಸ್ಥಳೀಯ ನಿವಾಸಿ ಜಗದೀಶ್ ಎಂದು ಗುರುತಿಸಲಾಗಿದೆ.