This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಕಾಂಗ್ರೆಸ್, ಲೋಕಸಭೆ ಚುನಾವಣೆ ಬಳಿಕ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್, ಲೋಕಸಭೆ ಚುನಾವಣೆ ಬಳಿಕ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಪ್ರಮಾಣ ವಚನ ಸ್ವೀಕರಿಸಿ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ ಆಗಲಿದೆ. ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ. ಕಾಂಗ್ರೆಸ್ ನಲ್ಲಿ ಮಂತ್ರಿಗಳ ಕುಟುಂಬಸ್ಥರಿಗೆ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕಾರಣ ಮೊದಲಿನಿಂದಲೂ ಬಂದಿದೆ. ಅದರಲ್ಲೇನು ಆಶ್ವರ್ಯ ಇಲ್ಲ. ಆದರೆ, ಈ ಬಾರಿ ಇಷ್ಟು ಪ್ರಮಾಣದಲ್ಲಿ ಕುಟುಂಬ ರಾಜಕೀಯ ನಡೆಯಲು ಕಾರಣ ಬೇರೆನೇ ಇದೆ. ಕಾಂಗ್ರೆಸ್‌ನ ಎಲ್ಲಾ ಮಂತ್ರಿಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು ಎಂದು ಮಾಹತಿ ನೀಡಿದರು.

ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಬಗ್ಗೆ ನಾಳೆ ತೀರ್ಮಾನ ಮಾಡುತ್ತೇವೆ. ಒಳ್ಳೆ ಸಮಯ ನೋಡಿ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಎರಡು ಸಲ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಒಂದು ಸಲ ವಯಕ್ತಿಕವಾಗಿ ಹಾಗೂ ಮೇಲೆ ಸಾರ್ವಜನಿಕವಾಗಿ ಒಮ್ಮೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು. ನಾನೂ ಸ್ಟಾರ್ ಪ್ರಚಾರಕನಾಗಿದ್ದೇನೆ. ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಎರಡನೇ ಹಂತದಲ್ಲೂ ಪ್ರಚಾರ ಮಾಡುತ್ತೇನೆ ಎಂದರು.

ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯದ ಸುಮಾರು 12 ಜನ ಮಂತ್ರಿಗಳಿಗೆ ಲೋಕಸಭೆ ಚುನಾವಣೆಗೆ ನಿಲ್ಲುವಂತೆ ಸೂಚನೆ ನೀಡಲಾಗಿತ್ತು. ಆದರೆ, ಅವರಿಗೆ ಗೆದ್ದು ಬರುವ ವಿಶ್ವಾಸ ಇರಲಿಲ್ಲ. ನೀವು ನಿಲ್ಲದಿದ್ದರೆ ಗೆಲ್ಲುವ ಅಭ್ಯರ್ಥಿಯನ್ನು ನೀವೇ ಕೊಡಿ ಅಂದಾಗ ಅನಿವಾರ್ಯವಾಗಿ ಅವರ ಮಕ್ಕಳು, ಅಣ್ಣ ತಮ್ಮಂದಿರು ಹಾಗೂ ಮೊಮ್ಮಕ್ಕಳಿಗೆ ಟಿಕೆಟ್ ಕೊಡಿಸಿದ್ದಾರೆ‌. ಕಾಂಗ್ರೆಸ್ ಗೆ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

 

Nimma Suddi
";