This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsPolitics NewsState News

ಬಿಬಿಎಂಪಿ ವಾರ್ಡ್ ಮರುವಿಂಗಡಣೆ : ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟ

ಬಿಬಿಎಂಪಿ ವಾರ್ಡ್ ಮರುವಿಂಗಡಣೆ : ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು : ಸುದೀರ್ಘ ಸಮಯದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಚುನಾವಣೆ ನಡೆಯುವ ಕಾಲ ಸನ್ನಿಹಿತವಾಗಿದೆ. ಬಿಬಿಎಂ ವಾರ್ಡ್ ಮರುವಿಂಗಡನೆಯ ಅಂತಿಮ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಆಗಸ್ಟ್ 18ರಂದು ವಾರ್ಡ್ ಮರುವಿಂಗಡನೆಯ ಕರಡು ಪಟ್ಟಿಯನ್ನು ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಅವಕಾಶ ನೀಡಿತ್ತು. ಇಂದು 225 ವಾರ್ಡ್ ಗಳನ್ನುಅಂತಿಮಗೊಳಿಸಿ ಗೆಜೆಟ್ ನೋಟಿಫಿಕೇಶನ್ ಪ್ರಕಟಿಸಿದೆ. ವಾರ್ಡ್ ಗಳ ಮರು ವಿಂಗಡಣೆ ಸಮಸ್ಯೆ ಇತ್ಯರ್ಥವಾಗಿರುವುದರಿಂದ ಈ ವರ್ಷದ ಡಿಸೆಂಬರ್ ನಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ.

ಬಿಬಿಎಂಪಿ ವಾರ್ಡ್ ಗಳ ಮರುವಿಂಗಡಣೆಗೆ ರಾಜ್ಯ ಸರ್ಕಾರ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿಯು ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚನೆ ಮಾಡಿದ್ದ 243 ವಾರ್ಡ್ ಗಳನ್ನು ರದ್ದು ಮಾಡಿ 225 ವಾರ್ಡ್ ಗಳಾಗಿ ಮರುವಿಂಗಡಣೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಸರ್ಕಾರ ವಾರ್ಡ್ ಮರುವಿಂಗಡಣೆಯ ಕರಡು ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು ಸಮಯ ನೀಡಿತ್ತು.

2020ರ ಸೆಪ್ಟೆಂಬರ್ ನಲ್ಲಿ ಬಿಬಿಎಂಪಿ ಸದಸ್ಯರ (ಕಾರ್ಪೋರೇಟರ್‌ಗಳ) ಅಧಿಕಾರವಧಿ ಪೂರ್ಣಗೊಂಡಿದೆ. ಬಳಿಕ ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್‌ಗಳನ್ನು ಮರು ವಿಂಗಡಣೆ ಮಾಡಲಾಗಿತ್ತು. ಆದರೆ, ನಂತರ, ಬಿಬಿಎಂಪಿ-2020 ಹೊಸ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಈ ವೇಳೆ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆಯನ್ನು 243ಕ್ಕೆ ಏರಿಸಲಾಯಿತು. ಆದರೆ, ಈ ವಾರ್ಡ್‌ ಮರುವಿಂಗಡಣೆ ಸರಿಯಾಗಿಲ್ಲ ಎಂದು ಪಾಲಿಕೆಯ ಮಾಜಿ ಸದಸ್ಯರು ಹೈಕೋರ್ಟ್‌ ಮೊರೆ ಹೋಗಿದ್ದರು.

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತಪ್ಪುಗಳನ್ನು ಸರಿಪಡಿಸಿ 12 ವಾರಗಳಲ್ಲಿ ಹೊಸದಾಗಿ ವಾರ್ಡ್‌ಗಳ ಮರುವಿಂಗಡಣೆ ಮಾಡುವಂತೆ ಆದೇಶಿತ್ತು. ಹಾಗಾಗಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಮೂರನೇ ಬಾರಿಗೆ ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಗೆ ಸಮಿತಿ ರಚಿಸಿತ್ತು. ಈ ಸಮಿತಿ ವಾರ್ಡ್ ಗಳನ್ನು ಮರುವಿಂಗಡಣೆ ಮಾಡಿ ಸಿಎಂಗೆ ವರದಿ ಒಪ್ಪಿಸಿತ್ತು

";