This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

Politics News

ಚುನಾವಣೆಗೂ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ – ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ

ಚುನಾವಣೆಗೂ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ – ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ” ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದು, ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ ಗೆ ಹೋಗಿದ್ದರು ” ಎಂದರು.

ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್ ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್ ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದ್ದು, ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ” ಎಂದು ಹೇಳಿದರು.

ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್ ನ ಪ್ರಮುಖ ನಾಯಕರೂ ಕೂಡ ಪಕ್ಷಕ್ಕೆ ಬರಲಿದ್ದು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗುವ ಸಾಧ್ಯತೆ ” ಇದೆ ಎಂದು ವಿವರಿಸಿದರು.

Nimma Suddi
";