ಚಿಕ್ಕೋಡಿ: ಬೆಳಗಾವಿ ಜಿಲ್ಲಾದ್ಯಂತ ಈ ಬಾರಿ ಬೇಸಿಗೆ ರಜೆ ಅವಧಿಯಲ್ಲೂ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸವಿಯಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರಿಂದ ರಾಜ್ಯ ಸರಕಾರ ಬರಪೀಡಿತ ತಾಲೂಕುಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಏಪ್ರಿಲ್ ಹಾಗೂ ಮೇ ತಿಂಗಳ ಒಟ್ಟು 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಇದು ಅನುಷ್ಠಾನಗೊಳ್ಳುತ್ತಿದೆ.
ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 8ನೇ ತರಗತಿಯಲ್ಲಿಒಟ್ಟು 4,82,192 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ರಜೆ ಅವಧಿಯಲ್ಲಿ ಬಿಸಿಯೂಟ ಪಡೆಯಲು ಇಚ್ಛಿಸುವ ಮಕ್ಕಳ ಸಂಖ್ಯೆಯನ್ನು ತರಗತಿ, ಶಾಲಾವಾರು ಸಂಗ್ರಹಿಸಲಾಗಿದ್ದು, ಒಟ್ಟು 2,21,042 ಮಕ್ಕಳು ಬಿಸಿಯೂಟ ಪಡೆಯಲು ಒಪ್ಪಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಆವರಿಸಿಕೊಂಡಿದೆ. ಬರಪೀಡಿತ ತಾಲೂಕುಗಳ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಸಕ್ತ ಸಾಲಿನ ಏಪ್ರಿಲ್ ಹಾಗೂ ಮೇ ತಿಂಗಳ ಒಟ್ಟು 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಹಮ್ಮಿಕೊಂಡಿದೆ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಇದು ಅನುಷ್ಠಾನಗೊಳ್ಳುತ್ತಿದೆ.
ಏಪ್ರಿಲ್ ಹಾಗೂ ಮೇ ತಿಂಗಳ ಒಟ್ಟು 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ
ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಅನುಷ್ಠಾನಗೊಳ್ಳುತ್ತಿದೆ ಮಕ್ಕಳ ಮಧ್ಯಾಹ್ನದ ಊಟದ ಚಿಂತೆಯಿಲ್ಲದೇ ನಿಶ್ಚಿಂತೆಯಿಂದ ದುಡಿಯಬಹುದು ಎಂದು ಪಾಲಕರ ಸಂತಸ ವ್ಯಕ್ತಪಡಿಸಿದ್ದಾರೆ.