This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Crime News

ಶಿಕ್ಷಣದ ಜೊತೆಗೆ ಕ್ರೀಡೆ ಅವಶ್ಯ:ಶಾಸಕ ಚರಂತಿಮಠ

ಶಿಕ್ಷಣದ ಜೊತೆಗೆ ಕ್ರೀಡೆ ಅವಶ್ಯ:ಶಾಸಕ ಚರಂತಿಮಠ

ಪ್ರಾಥಮಿಕ, ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ನಿಮ್ಮ ಸುದ್ದಿ ಬಾಗಲಕೋಟೆ

ಶಿಕ್ಷಣದ ಜೊತೆಗೆ ಮಕ್ಕಳ ದೈಹಿಕ, ಮಾನಸಿಕ ಬೆಳೆವಣಿಗೆಗೆ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳು ಅವಶ್ಯವಾಗಿವೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನಸಿಕ ಬೆಳವಣಿಗೆಗೆ ಸಾಂಸ್ಕøತಿಕ ಚಟುವಟಿಕೆಗಳು ಅವಶ್ಯವಾದರೆ, ದೈಹಿಕ ಬೆಳೆವಣಿಗೆಗೆ ಕ್ರೀಡೆಗಳು ಅವಶ್ಯವಾಗಿವೆ. ಈ ನಿಟ್ಟಿನಲ್ಲಿ ಭಾರತದ ಪ್ರಧಾನ ಮಂತ್ರಿಗಳು ಕಳೆದ 8 ವರ್ಷಗಳಿಂದ ಸತತವಾಗಿ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇದರಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕ್ರೀಡಾಪಟುಗಳು ಕಂಚು, ಬೆಳ್ಳಿ ಹಾಗೂ ಬಂಗಾರದ ಪದಕಗಳನ್ನು ಪಡೆಯುವಂತಾಗಿದೆ ಎಂದರು.

ಪ್ರತಿಯೊಂದು ದೇಶದಲ್ಲಿ ಭಾರತದ ಕ್ರೀಡಾಪಟುಗಳು ಮಿಂಚುತ್ತಿದ್ದಾರೆ. ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಕ್ರೀಟಾಪಟುಗಳನ್ನು ತಯಾರು ಮಾಡಲಾಗುತ್ತಿದೆ. ದೇಶಿಯ ಕ್ರೀಡೆಗಳಾದ ಹಾಕಿ, ಖೋಖೋ, ಕಬಡ್ಡಿಗಳಿಗೆ ಹೆಚ್ಚಿನ ಅವಕಾಶ ಇಲಾಖೆ ಕಲ್ಪಿಸಿಕೊಟ್ಟಿದೆ. ತಮ್ಮ ವ್ಯಕ್ತಿತ್ವವನ್ನು ಪ್ರದರ್ಶನ ಮಾಡುವಂತ ವೇದಿಕೆ ಇದಾಗಿದ್ದು, ಸೋಲು-ಗೆಲುವನ್ನು ಸಮನಾಗಿ ಸ್ವೀಕರಿ ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಹೊಂದಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ಆರ್.ಪಾಟೀಲ ಮಾತನಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟಗಳಲ್ಲಿ 29 ವೈಯಕ್ತಿಕ ಹಾಗೂ 15 ಗುಂಪು ಸ್ಪರ್ಧೆಗಳಿದ್ದು, ಪ್ರಾಥಮಿಕ ವಿಭಾಗದಿಂದ 800 ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿಭಾಗದಿಂದ 1060 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಕ್ರೀಡೆಗಳಲ್ಲಿ ಭಾಗವಹಿಸಿದ ಪ್ರತಿಯೊಂದು ವಿದ್ಯಾರ್ಥಿಗಳು ನಿರ್ಣಾಯಕರ ನಿರ್ಣಯಕ್ಕೆ ಬದ್ದರಾಗಿರಬೇಕು ಎಂದು ತಿಳಿಸಿದರು.

ಪ್ರಾರಂಭದಲ್ಲಿ ಶಾಸಕ ವೀರಣ್ಣ ಚರಂತಿಮಠ ಅವರು ಕ್ರೀಡಾ ಧ್ವಜಾರೋಹಣವನ್ನು ನೇರವೇರಿಸಿ, ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ರಾಂಪೂರ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕುಮಾರ ಎಳ್ಳಿಗುತ್ತಿ, ನಗರಸಭೆ ಸದಸ್ಯ ರವಿ ದಾಮಜಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಉಪಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೆದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಸಾವಿತ್ರಿ ಕೊಂಡಗೋಳಿ, ಕ್ಷೇತ್ರ ಸಮನ್ವಾಧಿಕಾರಿ ಎಚ್.ಕೆ.ಗುಡೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಛಾಯಾಚಿತ್ರ ಲಗತ್ತಿಸಿದೆ. 1 ರಿಂದ 4