ಬೆಂಗಳೂರು:
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ತಂಡದ ಕೃತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ರಾಮನಗರ ಮಾತ್ರವಲ್ಲದೆ, ಮಲ್ಲೇಶ್ವರ, ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟಿಸಿದರು. ಯಶವಂತಪುರದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಈ ಘಟನೆ ಖಂಡಿಸಿ ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.