ಬೆಂಗಳೂರು: ಲೋಕಸಭೆ ಚುನಾವಣೆಗೆ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದು, ಇಂದು ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೊದಲ ಮೈತ್ರಿ ಸಭೆ ನಡೆಸಿದರು.
ಈ ಸಭೆಯಲ್ಲಿ ಉಪ ಚುನಾವಣೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಿದ್ದು, ಈ ಬಗ್ಗೆ ಪಕ್ಷದ ವರಿಷ್ಠರ ಭೇಟಿ ನಂತರ ಅಂತಿಮ ಘೋಷಣೆಯಾಗಲಿದ್ದು. ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದ್ರೆ, ಇದೀಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ತೀರ್ಮಾನಿಸಿದೆ.
ಮೊದಲ ಸಭೆಯಲ್ಲೇ ತಮ್ಮ ಮಿತ್ರ ಪಕ್ಷಕ್ಕೆ ಬಿಜೆಪಿ ನಾಯಕರು ಜೈ ಎಂದಿದ್ದು, ಅದನ್ನು ಹೈಕಮಾಂಡ್ ಗಮನಕ್ಕೆ ತಂದು ಅಧಿಕೃತ ಘೋಷಣೆ ಮಾಡಲಿದ್ದು, ಎನ್ ಡಿಎ ಮೈತ್ರಿಕೂಟದ ಮೊದಲ ಮೈತ್ರಿ ಸಭೆಯಲ್ಲಿ ಸದ್ಯದ ರಾಜ್ಯ ರಾಜಕೀಯಯದ ಬಗ್ಗೆ ಮಹತ್ವದ ಚರ್ಚೆಗಳು ಆಗಿವೆ. ಮುಂಬರುವ ವಿಧಾನಪರಿಷತ್ ಹಾಗೂ ಲೋಕಸಭಾ ಚುನಾವಣೆ ಕುರಿತು ಮಾತುಕತೆಗಳು ನಡೆದಿವೆ. ಆದ್ರೆ, ಕ್ಷೇತ್ರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆಗಳು ನಡೆದಿಲ್ಲ ಎನ್ನಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.