This is the title of the web page
This is the title of the web page

Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ ಕಡೆಯಿಂದ ಒತ್ತಾಯ

ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡಲು ಚುನಾವಣಾ ಆಯೋಗಕ್ಕೆ ಬಿಜೆಪಿ ಕಡೆಯಿಂದ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆ ವೇಳೆ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆಯ ವಿಡಿಯೋಗ್ರಫಿ ಮಾಡುವಂತೆ ಬಿಜೆಪಿಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಬಿಜೆಪಿ ನಿಯೋಗವು ಬುಧವಾರ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿತ್ತು, ಬಹುಮಹಡಿ ಅಪಾರ್ಟ್​ಮೆಂಟ್​ಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿತು ಎಂದು ಮಾಹಿತಿ ಕಂಡು ಬಂದಿದೆ.

ಮಧ್ಯಾಹ್ನ 3.30ರ ಸುಮಾರಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಪಕ್ಷದ ಇತರೆ ಹಿರಿಯ ನಾಯಕರೊಂದಿಗೆ ನಿಯೋಗದ ನೇತೃತ್ವವಹಿಸಿ ಆಯೋಗವನ್ನು ಭೇಟಿಯಾಗಿದ್ದು, ಮೂರು ವಿಷಯಗಳ ಕುರಿತು ಚುನಾವಣಾ ಆಯೋಗದೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಅಪಾರ್ಟ್​ಮೆಂಟ್​ಗಳಲ್ಲಿ ಮತದಾನ ಕೇಂದ್ರಗಳನ್ನು ತೆರೆಯುವುದು, 100ರಷ್ಟು ಮತದಾನ ಕೇಂದ್ರಗಳ ವಿಡಿಯೋ ರೆಕಾರ್ಡ್​ ಮಾಡುವಂತೆಯೂ ಪಕ್ಷ ಒತ್ತಾಯಿಸಿದೆ.

ಇದುವರೆಗೆ ಚುನಾವಣಾ ಆಯೋಗವು ದೇಶಾದ್ಯಂತ ಶೇ.50ರಷ್ಟು ಮತದಾನ ಕೇಂದ್ರಗಳ ವಿಡಿಯೋ ರೆಕಾರ್ಡ್​ ಮಾಡುತ್ತಿದೆ. ಈ ಪ್ರಕ್ರಿಯೆಯಲ್ಲಿ ಹೆಚ್ಚು ಪಾರದರ್ಶಕತೆ ತರಲು ನಾವು ಮತದಾನ ಕೇಂದ್ರಗಳ 100 ಪ್ರತಿಶತ ವಿಡಿಯೋ ರೆಕಾರ್ಡಿಂಗ್​ ಮಾಡಲು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.

ಆಯೋಗದ ಪ್ರಕಾರ ಮುಂಬರುವ ಲೋಕಸಭಾ ಚುನಾವಣೆಗೆ ದೇಶಾದ್ಯಂತ 12ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ರಚಿಸಲಾಗುವುದು.

Nimma Suddi
";