This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ರಾಜ್ಯಕ್ಕೆ ಬರಲಿದ್ದಾರೆ ಬಿಜೆಪಿ ಚಾಣಕ್ಯ

ನಿಮ್ಮ ಸುದ್ದಿ ಬೆಂಗಳೂರು

ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ “ಜನಸೇವಕ ಸಮಾವೇಶ”ವನ್ನು ಜನವರಿ 11 ರಿಂದ 13ರ ವರೆಗೆ ಹಮ್ಮಿಕೊಳ್ಳಲಾಗುವುದು.

ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ಜನವರಿ 16 ಅಥವಾ 17ರಂದು ನಡೆಯಲಿದೆ. ಪಕ್ಷದ ಹಿಂದಿನ ರಾಷ್ಟ್ರೀಯ ಅಧ್ಯಕ್ಷರು ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ ಮತ್ತು ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ತಿಳಿಸಿದರು.

ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ಕುಮಾರ್ ಕಟೀಲ್, ಸಚಿವರಾದ ಶ್ರೀ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದರಾದ ಶ್ರೀ ಪ್ರತಾಪಸಿಂಹ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ.ರಾಘವೇಂದ್ರ, ಎಸ್‌ಟಿ ಮೋರ್ಚಾ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವತ್ಥನಾರಾಯಣ್ ಅವರುಳ್ಳ ತಂಡವು 11ರಂದು ಮೈಸೂರು, ಚಾಮರಾಜನಗರ, 12ರಂದು ಹಾಸನ ಮತ್ತು ಮಂಡ್ಯ, 13ರಂದು ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿದೆ ಎಂದು ವಿವರಿಸಿದರು.

ಎರಡನೇ ತಂಡದ ನೇತೃತ್ವವನ್ನು ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ಅವರು ವಹಿಸುವರು. ಈ ತಂಡದಲ್ಲಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ.ರವಿ, ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಅರವಿಂದ ಲಿಂಬಾವಳಿ, ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಇರುವರು. ಶ್ರೀ ಎನ್.ರವಿಕುಮಾರ್ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. 11ರಂದು ಚಿಕ್ಕಮಗಳೂರು ಮತ್ತು ಉಡುಪಿ, 12ರಂದು ಮಡಿಕೇರಿ ಮತ್ತು ಮಂಗಳೂರು, 13ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ತಂಡ ಪ್ರವಾಸ ಮಾಡಲಿದೆ ಎಂದು ತಿಳಿಸಿದರು.

ಮೂರನೇ ತಂಡದ ನೇತೃತ್ವವನ್ನು ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ ಅವರು ವಹಿಸುವರು. ಸಚಿವರಾದ ಶ್ರೀ ವಿ.ಸೋಮಣ್ಣ, ಶ್ರೀ ರಮೇಶ್ ಜಾರಕಿಹೊಳಿ, ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷರಾದ ಶ್ರೀ ತಿಪ್ಪರಾಜು ಹವಾಲ್ದಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ತೇಜಸ್ವ್ವಿನಿ ಅನಂತಕುಮಾರ್ ಇರುವ ಈ ತಂಡದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ತುಳಸಿ ಮುನಿರಾಜು ಅವರು ಕಾರ್ಯ ನಿರ್ವಹಿಸುವರು. ಈ ತಂಡವು 11ರಂದು ಬೆಳಗಾವಿ, ಚಿಕ್ಕೋಡಿ, 12ರಂದು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆ, 13ರಂದು ಗದಗ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ ಎಂದರು.

ನಾಲ್ಕನೇ ತಂಡದ ನೇತೃತ್ವವನ್ನು ಸಚಿವರಾದ ಶ್ರೀ ಜಗದೀಶ ಶೆಟ್ಟರ್ ವಹಿಸಲಿದ್ದು, ತಂಡದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಷಿ, ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ, ಶ್ರೀ ಪ್ರಭು ಚವ್ಹಾಣ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮಾಲೀಕಯ್ಯ ಗುತ್ತೇದಾರ್, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಡಾ. ಸಂದೀಪ್ ಇರುವರು. ಈ ತಂಡದ ಸಂಚಾಲಕರಾಗಿ ಶ್ರೀ ಮಹೇಶ್ ಟೆಂಗಿನಕಾಯಿ ಭಾಗವಹಿಸಲಿದ್ದಾರೆ. 11ರಂದು ಬೀದರ್ ಮತ್ತು ಕಲಬುರ್ಗಿ, 12ರಂದು ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ, 13ರಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈ ತಂಡ ಪ್ರವಾಸ ಮಾಡಲಿದೆ.

ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ ಅವರ ನೇತೃತ್ವದ ಇನ್ನೊಂದು ತಂಡದಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಲಕ್ಷಣ ಸವದಿ, ಸಚಿವರಾದ ಶ್ರೀ ಬಿ.ಶ್ರೀರಾಮುಲು, ಶ್ರೀ ಬಸವರಾಜ ಬೊಮ್ಮಾಯಿ, ರಾಜ್ಯದ ಉಪಾಧ್ಯಕ್ಷರಾದ ಶೋಭಾ ಕರಂದ್ಲಾಜೆ, ಸಂಸದರಾದ ಶ್ರೀ ಶಿವಕುಮಾರ್ ಉದಾಸಿ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ ಇರಲಿದ್ದು, ಕಾರ್ಯಕ್ರಮದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ನವೀನ್ ಇರುವರು. ಈ ತಂಡವು 11ರಂದು ಹಾವೇರಿ ಮತ್ತು ದಾವಣಗೆರೆ ಜಿಲ್ಲೆ, 12ರಂದು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆ, 13ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಮಾವೇಶ ಏರ್ಪಡಿಸಲಿದೆ ಎಂದರು.

ಒಂದು ದೇಶ ಒಂದು ತೆರಿಗೆ, ಒಂದು ದೇಶ ಒಂದು ಪಡಿತರ ಚೀಟಿ ಅನುಷ್ಠಾನ ಆಗಿದೆ. ಒಂದು ದೇಶ ಒಂದೇ ಚುನಾವಣೆ ಕುರಿತ ಚರ್ಚೆ ವ್ಯಾಪಕವಾಗಿ ಆಗಬೇಕು. ಇದರಿಂದ ಸಂಪನ್ಮೂಲದ ಸದ್ಬಳಕೆ ಮತ್ತು ಅಭಿವೃದ್ಧಿ ಕಾರ್ಯ ಇನ್ನಷ್ಟು ವೇಗದಿಂದ ನಡೆಯಲು ಸಾಧ್ಯವಿದೆ. ಇದರ ಸಾಧಕ ಬಾಧಕಗಳ ಕುರಿತು ಚರ್ಚೆ ಅಗತ್ಯವಿದೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಟಿ.ಡಿ.ಮೇಘರಾಜ್, ವಿಭಾಗ ಪ್ರಭಾರಿಗಳಾದ ಶ್ರೀ ಗಿರೀಶ್ ಪಾಟೀಲ್, ರಾಜ್ಯ ಮಾಧ್ಯಮ ವಿಭಾಗದ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಸದಸ್ಯರಾದ ಶ್ರೀ ಅವಿನಾಶ್, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀ ಅಣ್ಣಪ್ಪ ಅವರು ಉಪಸ್ಥಿತರಿದ್ದರು.

";