ಹೈದರಾಬಾದ್ : ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ (33) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ ಒಆರ್‌ಆರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಕೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅತಿವೇಗದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಲಾಸ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಶಾಸಕಿ ಬಿಆರ್‌ಎಸ್ ನಲ್ಗೊಂಡ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಬಳಿಕ ಮನೆಗೆ ಮರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿತ್ತು. ಆದರೆ ಆಕೆ ಸುರಕ್ಷಿತವಾಗಿ ಅಪಘಾತದಿಂದ ಪಾರಾಗಿದ್ದರು. ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದರು. ಆದರೆ ಶುಕ್ರವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಆಕೆ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಸಿಕಂದರಾಬಾದ್ನ ಕಂಟೋನ್ಮೆಂಟ್ ಶಾಸಕಿ ಲಾಸ್ಯ ನಂದಿತಾ ಅವರ ನಿಧನಕ್ಕೆ ಬಿಆರ್‌ಎಸ್ ನಾಯಕರು ಕಂಬನಿ ಮಿಡಿದಿದ್ದು, ಸ್ವಲ್ಪ ಸಮಯದ ನಂತರ, ಮೃತದೇಹವನ್ನು ಚಿಕ್ಕಡಪಲ್ಲಿಯಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುತ್ತದೆ.ಕಳೆದ ವರ್ಷ ಇದೇ ತಿಂಗಳಲ್ಲಿ ಆಕೆಯ ತಂದೆ ಸಾಯಣ್ಣ ಮೃತಪಟ್ಟಿದ್ದರು. ಸಾಯಣ್ಣ 2023 ರ ಫೆಬ್ರವರಿ 19ರಂದು ನಿಧನರಾಗಿದ್ದರು. ಇದೀಗ ಅವರ ಮಗಳು 2024 ರ ಫೆಬ್ರವರಿ 23 ರಂದು ನಿಧನರಾಗಿದ್ದಾರೆ.