ಕಲಬುರಗಿ: ನಗರದಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕದಿಂದ ಮೋದಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ ಎಂದರು.
ರಾಜ್ಯಕ್ಕೆ ಮೋದಿ ಸಾಕಷ್ಟು ಅನುದಾನ ಕೊಟ್ಟಿದ್ದಾರೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಕಲ್ಯಾಣ ಕರ್ನಾಟಕಕ್ಕೆ ಹೆಚ್ಚು ಆಸಕ್ತಿಯನ್ನು ಮೋದಿ ಕೊಟ್ಟಿದ್ದಾರೆ. ಈ ಬಾರಿ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎಂದು ತಿಳಿಸಿದರು.
ಅಲ್ಲದೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕೇವಲ ಪ್ರಚಾರಕ್ಕಾಗಿ ಕೆಲವಹ ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ. 28 ಕ್ಷೇತ್ರದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನಾದರೂ ಗೆಲ್ಲಲಿ ನೋಡೋಣ ಎಂದು ವಿವರಿಸಿದರು.
ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ. ಯಾವುದೋ ಕಾರಣದಿಂದ ವಿಧಾನಸಭೆಯಲ್ಲಿ ಹಿನ್ನಡೆಯಾಗಿರಬಹುದು ಅಷ್ಟೇ ಎಂದು ಸೂಚಿಸಿದರು.