ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಲೋಕಸಭೆ ಚುನಾವಣೆಗೂ ಮುನ್ನ ಮೈತ್ರಿ ಮಾಡಿಕೊಳ್ಳುವ ವದಂತಿ ತಳ್ಳಿಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದು ಬೆಳಕಿಗೆ ಬಂದಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಸ್‌ಪಿ ಇಂಡಿಯಾ ಒಕ್ಕೂಟ ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನ ನಡೆಸುತ್ತಿದ್ದರು. ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಒಕ್ಕೂಟವನ್ನು ರಚಿಸುವುದಿಲ್ಲ ಮತ್ತು ಇದನ್ನು ಹಲವು ಬಾರಿ ಹೇಳಲಾಗಿದೆ ಎಂದು ಮಾಯಾವತಿ ತಿಳಿಸಿದರು.
ಸಮಾಜದ ಎಲ್ಲಾ ವರ್ಗಗಳ, ವಿಶೇಷವಾಗಿ ಬಡವರು, ತುಳಿತಕ್ಕೊಳಗಾದ ಮತ್ತು ನಿರ್ಲಕ್ಷಿತರ ಯೋಗಕ್ಷೇಮ ಮತ್ತು ಕಲ್ಯಾಣವನ್ನು ಪರಿಗಣಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇವಲ ಸ್ವಂತ ಬಲವನ್ನು ಅವಲಂಬಿಸಿ ಸ್ವತಂತ್ರವಾಗಿ ಸ್ಪರ್ಧಿಸುವ ಬಿಎಸ್ಪಿಯ ನಿರ್ಧಾರವು ಅಚಲವಾಗಿದೆ ಎಂದು ಹೇಳಿದ್ದಾರೆ.
ಬಿಎಸ್ಪಿಗೆ ಇಂಡಿಯಾ ಒಕ್ಕೂಟದ ಬಾಗಿಲು ತೆರೆದಿದೆ ಎಂದು ಕಾಂಗ್ರೆಸ್‌ನ ಉತ್ತರ ಅವಿನಾಶ್ ಪಾಂಡೆ ತಿಳಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಬೇಕೇ ಎಂದು ಮಾಯಾವತಿ ನಿರ್ಧರಿಸಬೇಕಾಗಿದೆ