ನಿಮ್ಮ ಸುದ್ದಿ ಬಾಗಲಕೊಟೆ
ಸದ್ಯೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆದುಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರು ಹೇಳಿದರು.
ನಗರದಲ್ಲಿ ನಡೆದ ಜನಸ್ವರಾಜ್ ಸಮಾವೇಶದ ಅಂಗವಾಗಿ ಬಾಗಲಕೋಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಡೆಯುವ ವಿಧಾನ ಪರಿಷತ್ ಚುಣಾವಣೆಯಲ್ಲಿ 20 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಹೆಚ್ಚು ಸ್ಥಾನ ಗೆಲ್ಲುವ ಮೂಲಕ ವಿಧಾನ ಪರಿಷತ್ದಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿಸಚಿವರಾದ ಶ್ರೀ ಎಂ. ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎನ್. ರವಿಕುಮಾರ್, ವಿಧಾನ ಪರಿಷತ್ ಅಧಿಕೃತ ಅಭ್ಯರ್ಥಿ ಶ್ರೀ ಪಿ.ಎಚ್.ಪೂಜಾರ, ಸಂಸದರಾದ ಶ್ರೀ ಪಿ.ಸಿ.ಗದ್ದಿಗೌಡರ, ಶಾಸಕರುಗಳಾದ ಶ್ರೀ ವೀರಣ್ಣ ಚರಂತಿಮಠ, ಶ್ರೀ ದೊಡ್ಡನಗೌಡ ಪಾಟೀಲ್, ಶೀಸಿದ್ದು ಸವದಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಶಾಂತಗೌಡ ಪಾಟೀಲ್ ಉಪಸ್ಥಿತರಿದ್ದರು.