This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Agriculture NewsEducation NewsLocal NewsNational NewsPolitics NewsState News

Cauvery Dispute : CWRC ಆದೇಶಕ್ಕೆ ಧಿಕ್ಕಾರ, ತಮಿಳುನಾಡಿಗೆ ನೀರು ಬಿಡಲ್ಲ, ಬಿಡಲ್ಲ, ಬಿಡಲ್ಲ; ಸರ್ವಪಕ್ಷ ಸಭೆಯಲ್ಲಿ ಒಗ್ಗಟ್ಟಿನ ನಿರ್ಣಯ

Cauvery Dispute : CWRC ಆದೇಶಕ್ಕೆ ಧಿಕ್ಕಾರ, ತಮಿಳುನಾಡಿಗೆ ನೀರು ಬಿಡಲ್ಲ, ಬಿಡಲ್ಲ, ಬಿಡಲ್ಲ; ಸರ್ವಪಕ್ಷ ಸಭೆಯಲ್ಲಿ ಒಗ್ಗಟ್ಟಿನ ನಿರ್ಣಯ

ಬೆಂಗಳೂರು: ಇನ್ನೂ ಹದಿನೈದು ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನವೂ 5000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (Cauvery water regulation committee) ಆದೇಶವನ್ನು ಧಿಕ್ಕರಿಸಲು ರಾಜ್ಯ (Karnataka Rejects CWRC Order) ನಿರ್ಧರಿಸಿದೆ. ಸಮಿತಿಯು ಮಂಗಳವಾರ ನೀಡಿದ ಅದೇಶದ ಬಗ್ಗೆ ಚರ್ಚೆ ಮಾಡಲು ಬುಧವಾರ ಕರೆದಿದ್ದ ಸರ್ವ ಪಕ್ಷ ಸಭೆಯು (All Party Meeting) ಯಾವ ಕಾರಣಕ್ಕೂ ನೀರು ಬಿಡಬಾರದು ಎಂಬ ಒಮ್ಮತದ ತೀರ್ಮಾನಕ್ಕೆ ಬಂದಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery water Management Authority) ಮುಂದೆ ಮತ್ತೊಂದು ಅರ್ಜಿ ಹಾಕಲು ಮತ್ತು ಸುಪ್ರೀಂಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಕಟಿಸಿದರು. ಕಾವೇರಿ ವಸ್ತು ಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆಯುವುದಾಗಿ ತಿಳಿಸಿದರು.

Cauvery all party meeting
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಜಮೀರ್ ಅಹಮದ್ ಖಾನ್ , ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಕಾವೇರಿ ಭಾಗದ ಸಂಸದರು, ಶಾಸಕರು ಉಪಸ್ಥಿತರಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಬಿಜೆಪಿಯಿಂದ ಡಾ. ಸಿ.ಎನ್‌. ಅಶ್ವಥ್ ನಾರಾಯಣ, ಲೆಹರ್ ಸಿಂಗ್, ಪಿ.ಸಿ ಮೋಹನ್, ಸಂಸದ ಪ್ರತಾಪ್‌ ಸಿಂಹ, ಪಕ್ಷೇತರ ಸಂಸದೆ ಸುಮಲತಾ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ಉಪಸ್ಥಿತರಿದ್ದರು.

Cauvery all Party Meeting
ಬಿಡಬೇಕಾ ಎನ್ನುವ ಪ್ರಶ್ನೆಯಲ್ಲಿ ಬಿಡುವುದಕ್ಕೆ ನೀರೇ ಇಲ್ಲ ಎಂದ ಸಿಎಂ
ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಹೇಳಿದರು.

ʻʻಇದುವರೆಗಿನ ಆದೇಶದ ಪ್ರಕಾರ ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ನಮ್ಮ ರೈತರ ಪ್ರಾಣವನ್ನು, ಹಿತವನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲʼʼ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ನಾವ್ಯಾಕೆ ನೀರು ಬಿಟ್ಟಿದ್ದೇವೆ ಎಂದರೆ.. ಸಿದ್ದರಾಮಯ್ಯ ವಿವರಣೆ
Cauvery water dispute
ಆಗಸ್ಟ್‌ 28ರಂದು ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ನೀಡಿತ್ತು. ನಮ್ಮ ವಾದ ಆಲಿಸಿದ ನಂತರ ಐದು ಸಾವಿರ ಕ್ಯೂಸೆಕ್ಸ್ ಬಿಡಲು ಸೂಚಿಸಿತ್ತು. ಮತ್ತೆ ನಿನ್ನೆ (ಸೆ. 12) ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದೆ. ಸಾಮಾನ್ಯ ಮಳೆಯಾದಾಗ ನೀರು ಬಿಡಲು ತಕರಾರಿಲ್ಲ. ಕಳೆದ ವರ್ಷ 667 ಟಿಎಂಸಿ ಬಿಡಲಾಗಿದೆ. ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ ಎಂದು ಸಿದ್ದರಾಮಯ್ಯ ವಿವರಿಸಿದರು. ಕಳೆದ ಬಾರಿಯ ಆದೇಶದ ಪಾಲನೆ ಮಾಡಿದ್ದನ್ನು ಅವರು ಸಮರ್ಥಿಸಿದರು.

99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು. ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಬೇಕಾಗಿದೆ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ. ಅಧಿಕಾರಿಗಳು ರಾಜ್ಯದ ಪರಿಸ್ಥಿತಿ, ವಾಸ್ತವಾಂಶ ತಿಳಿಸಿದರೂ ನೀರು ಬಿಡುವಂತೆ ಸೂಚಿಸಿದ್ದಾರೆ

ಸುಪ್ರೀಂ ಕೋರ್ಟಿಗೆ ಹೋಗುವಾಗ ಪ್ರಾಧಿಕಾರದ ಆದೇಶ ಪಾಲನೆಯಾಗಿದೆಯಾ ಎಂದು ಕೇಳುತ್ತಾರೆ. ಆಗ ನೀರು ಬಿಡದಿದ್ದರೆ ಕಷ್ಟವಾಗುತ್ತದೆ. ನಮ್ಮ ಮುಂದೆ ಎರಡು ದಾರಿ ಇದೆ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮತ್ತೆ ಅರ್ಜಿ ಹಾಕುವುದು ಮೊದಲ ದಾರಿ. ಎರಡನೇ ಆಯ್ಕೆ ನೀರು ಇಲ್ಲ ನಮ್ಮ ಬಳಿ ಎಂದು ಸುಪ್ರೀಂ ಕೋರ್ಟಿನ ಮೊರೆ ಹೋಗಬೇಕು.

ಇಂದು ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಿ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದಾರೆ. ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ. ನಾವು ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ, ನೀರು ಕೊಡುವುದು ಕಷ್ಟವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ರೈತರನ್ನು ಬಲಿಕೊಟ್ಟು ನೀರು ಕೊಡಲಾಗದು. ಈಗ ಸಂಕಷ್ಟದಲ್ಲಿದ್ದೇವೆ ನಾವು. ನಾವೆಲ್ಲರೂ ಒಟ್ಟಿಗೆ ಹೋಗಬೇಕು. ಈ ಸಂಕಷ್ಟಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ ಎಂದರು ಸಿದ್ದರಾಮಯ್ಯ

ಹೀಗಾಗಿ ಎಲ್ಲ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನಮ್ಮ ರಾಜಕೀಯ ಒಲವು, ನಿಲುವುಗಳನ್ನು ಬದಿಗಿಟ್ಟು, ರಾಜ್ಯದ ಹಿತಾಸಕ್ತಿಯ ದೃಷ್ಟಿಯಿಂದ ಒಟ್ಟಿಗೆ ಕೆಲಸ ಮಾಡೋಣ ಎಂದು ಎಲ್ಲರಲ್ಲೂ ಮನವಿ ಮಾಡಿದರು.