ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲಾ ಪಂಚಾಯತ ಸ್ವಚ್ಛ ಭಾರತ (ಗ್ರಾಮೀಣ) ಯೋಜನೆಯಡಿ ಜಿಪಂ ಸಭಾಭವನದಲ್ಲಿ ಶುಕ್ರವಾರ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಜಿಪಂ ಸಿಇಒ ಟಿ.ಭೂಬಾಲನ ಕಾರ್ಯಕ್ರಮ ಉದ್ಘಾಟಿಸಿದರು. ಉಪನ್ಯಾಸಕರಾಗಿ ಆಗಮಿಸಿದ್ದ ತಾಯಿ ಮತ್ತು ಮಕ್ಕಳ ಆರೋಗ್ಯಾಕಾರಿ ಡಾ.ಜಯಶ್ರೀ ಎಮ್ಮಿ ಮಾತನಾಡಿ, ಮಹಿಳೆಯರಲ್ಲಿ ಮುಟ್ಟು ಒಂದು ಸಹಜ ಪ್ರಕ್ರಿಯೆಯಾಗಿದೆ. ಹಾಗಾಗಿ ಇದರಿಂದ ಮುಜುಗರತೆ ತೊಡೆದು ಹಾಕಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಶತ ಶೇ.೪೦ರಷ್ಟು ಬಳಕೆ ಮಾಡುತ್ತಿದ್ದು, ಸಂಪೂರ್ಣವಾಗಿ ಮಹಿಳೆಯರು ಸ್ಯಾನಿಟರಿ ಪ್ಯಾಡ್ ಬಳಕೆ ಮೂಲಕ ಆರೋಗ್ಯ ಕಾಪಾಡಿಕೊಳ್ಳಲು ಅವಶ್ಯಕವಾಗಿದೆ ಎಂದು ತಿಳಿಸಿದರು.
ಪ್ರತಿ ಗ್ರಾಮಗಳಲ್ಲಿ ಸರಕಾರದಿಂದ ಶುಚಿ ಪ್ಯಾಡ್‌ಗಳನ್ನು ಉಚಿತವಾಗಿ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳವದರೊಂದಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಋತುಚಕ್ರ ಸಂದರ್ಭದಲ್ಲಿ ಬಟ್ಟೆ ಬಳಕೆ ಮಾಡುವುದರಿಂದ ಸೋಂಕು ತಗಲುವ ಪ್ರಮಾಣ ಹೆಚ್ಚಾಗಿದ್ದು, ಬಟ್ಟೆ ಬಳಕೆ ತೊಡೆದು ಹಾಕಿ ಪ್ಯಾಡ್ ಬಳಕೆ ಮಾಡಿ ಹಾಗೂ ಋತುಚಕ್ರದ ಕಪ್‌ಗಳನ್ನು ಬಳಕೆ ಮಾಡಬೇಕು. ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ರಕ್ತ ಹಿನತೆ ಕಂಡಲ್ಲಿ ೩ ರಿಂದ ೪ ತಿಂಗಳು ಕ್ಯಾಲ್ಸಿಯಂ ಮಾತ್ರೆ ತೆಗೆದುಕೊಳ್ಳುವುದು ಸೂಕ್ತ ಎಂದರು.
ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ವಿತರಿಸಲಾಯಿತು. ಜಿ.ಪಂ ಯೋಜನಾ ನಿರ್ದೇಶಕ ಎಂ.ಜಿ.ಮAಗೋಜಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಐಇಸಿ ಸಮಾಲೋಚಕಿ ಕಾವೇರಿ ಝಂಢೇ, ಜಿಲ್ಲಾಡಳಿತ ಭವನದಲ್ಲಿ ನಾನಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಕಾರಿಗಳು ಹಾಗೂ ಸಿಬ್ಬಂದಿ ಇದ್ದರು.