ಬಾಗಲಕೋಟೆ:
ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಮೇ 10 ರಂದು ಜರುಗಲಿರುವ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಮುದಾಯದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ತಿಳಿಸಿದ್ದಾರೆ.